ಸೋಮವಾರದಿಂದ ನಾಲ್ಕು ದಿನಗಳ ವಿಶೇಷ ಸಂಸತ್ ಅಧಿವೇಶನ, ಲೋಕಸಭೆ: 815 ಸ್ಥಾನ ಹೆಚ್ಚಳಕ್ಕೆ ಸಂಪುಟ ಅಸ್ತು

ನವದೆಹಲಿ, ನ.27: ಲೋಕಸಭೆಯ ಸ್ಥಾನಗಳನ್ನು ಈಗ ಇರುವ 543 ರಿಂದ 850ಕ್ಕೆ ಅಂದರೆ ಶೇ.50ರಷ್ಟು ಹೆಚ್ಚಿಸುವ ಸಾಂವಿಧಾನಿಕ ತಿದ್ದುಪಡಿ ವಿಧೇಯಕಕ್ಕೆ ಕೇಂದ್ರ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ.

ಕ್ಷೇತ್ರ ಮರುವಿಂಗಡಣೆಯೊಂದಿಗೆ ಜೋಡಿಸಲಾದ ಮಹಿಳಾ ಮೀಸಲಾತಿ ಮಸೂದೆಗೂ ಸಹ ಸಚಿವ ಸಂಪುಟ ಇದೇ ವೇಳೆ ಒಪ್ಪಿಗೆ ನೀಡಿದ್ದು, ಸೋಮವಾರದಿಂದ ಆರಂಭವಾಗಲಿರುವ ವಿಶೇಷ ಅಧಿವೇಶನದಲ್ಲಿ ಇದನ್ನು ಮಂಡಿಸಿ ಉಭಯ ಸದನಗಳ ಒಪ್ಪಿಗೆ ಪಡೆಯಲು ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ತಂತ್ರ ರೂಪಿಸಿದೆ.

ಪರಿಷ್ಕೃತ ಬಿಲ್ ಲೋಕಸಭಾ ಸ್ಥಾನಗಳ ಸಂಖ್ಯೆಯಲ್ಲಿ ಶೇ. 50 ರಷ್ಟು ಹೆಚ್ಚಳಕ್ಕೆ ಅವಕಾಶ ನೀಡುತ್ತದೆ ಮತ್ತು ರಾಜ್ಯಗಳ ನಡುವೆ ಸ್ಥಾನಗಳ ಹಂಚಿಕೆಯನ್ನು 25 ವರ್ಷಗಳ ಕಾಲ ಅಂದರೆ 2051ರವರೆಗೆ ಮುಂದುವರಿಯಲಿದೆ.

ಸೋಮವಾರ (ನ.30)ರಿಂದ ನಾಲ್ಕು ದಿನಗಳ ವಿಶೇಷ ಸಂಸತ್ ಅಧಿವೇಶನ ಕರೆಯಲಾಗಿದೆ. 18ನೇ ಲೋಕಸಭೆಯ 8ನೇ ಅಧಿವೇಶನದ ಎರಡನೇ ಭಾಗವು ನವೆಂಬರ್ 30ರಿಂದ ಡಿಸೆಂಬರ್ 3ರವರೆಗೆ ನಡೆಯಲಿದೆ ಎಂದು ಲೋಕಸಭಾ ಸಚಿವಾಲಯ ಗುರುವಾರ ಘೋಷಿಸಿದ ಬಳಿಕ ಈ ಬೆಳವಣಿಗೆಗಳು ನಡೆದಿವೆ.

ಕಳೆದ ಏಪ್ರಿಲ್‌ನಲ್ಲಿ ನಡೆದ ಸಂಸತ್ತಿನ ಮತದಾನದಲ್ಲಿ ಸಂವಿಧಾನ ತಿದ್ದುಪಡಿಗೆ ಅಗತ್ಯವಿದ್ದ ಮೂರನೇ ಎರಡರಷ್ಟು ಬಹುಮತ ದೊರೆಯದ ಕಾರಣ ಮಸೂದೆ ಅಂಗೀಕಾರವಾಗಿರಲಿಲ್ಲ. ಈಗ ಕೇಂದ್ರ ಸರ್ಕಾರ ಮಿತ್ರ ಪಕ್ಷಗಳ ಸಹಕಾರದೊಂದಿಗೆ ಅಗತ್ಯ ಮತಗಳನ್ನು ಪಡೆಯುವ ವಿಶ್ವಾಸ ತೋರಿಸಿದೆ.

ಶೇ.50ರಷ್ಟು ಸ್ಥಾನ ಹೆಚ್ಚಳ
ಕೇಂದ್ರ ಸರ್ಕಾರದ ಪ್ರಸ್ತಾವನೆಯ ಪ್ರಕಾರ, ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ ಇರುವ 543ರಿಂದ ಶೇ.50ರಷ್ಟು ಹೆಚ್ಚಿಸುವ ಉದ್ದೇಶವಿದೆ. ಇದರಿಂದ ಲೋಕಸಭೆಯ ಸದಸ್ಯರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಲಿದೆ.

ಲೋಕಸಭಾ ಸ್ಥಾನ ಹೆಚ್ಚಳವವನ್ನು ಪ್ರಸ್ತುತ ಜನಸಂಖ್ಯಾ ಆಧಾರದ ಮೇಲೆ ಮಾಡುವುದರಿಂದ ಉತ್ತರ ಭಾರತದ ರಾಜ್ಯಗಳಲ್ಲಿ ಹೆಚ್ಚಿನ ಜನಸಂಖ್ಯೆ ಇದ್ದು, ಅಲ್ಲಿ ಹೆಚ್ಚಿನ ಸ್ಥಾನಗಳು ಹಂಚಿಕೆಯಾಗುತ್ತವೆ. ಕರ್ನಾಟಕ ಸೇರಿ ದಕ್ಷಿಣ ಭಾರತದ ರಾಜ್ಯಗಳು ಜನಸಂಖ್ಯಾ ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಜಾರಿ ಮಾಡಿದ್ದು, ಜನಸಂಖ್ಯೆ ನಿಯಂತ್ರಣದಲ್ಲಿದೆ. ಇದರಿಂದ ದಕ್ಷಿಣ ರಾಜ್ಯಗಳ ಸ್ಥಾನ ಕಡಿಮೆಯಾಗಿ ಕೇಂದ್ರದ ಅಧಿಕಾರದಲ್ಲಿ ಪ್ರಾಬಲ್ಯ ಕಡಿಮೆಯಾಗುತ್ತದೆ ಎಂಬ ಆತಂಕ ಇತ್ತು.

ಕ್ಷೇತ್ರ ಮರುವಿಂಗಡಣೆ ಕೇವಲ ಚುನಾವಣಾ ಕ್ಷೇತ್ರಗಳ ಗಡಿ ಬದಲಾವಣೆಯ ಪ್ರಕ್ರಿಯೆಯಲ್ಲ. ಇದು ಲೋಕಸಭೆಯಲ್ಲಿ ಯಾವ ರಾಜ್ಯಕ್ಕೆ ಎಷ್ಟು ಸ್ಥಾನಗಳು ದೊರೆಯಬೇಕು ಎಂಬುದನ್ನು ನಿರ್ಧರಿಸುವ ಪ್ರಮುಖ ಪ್ರಕ್ರಿಯೆಯಾಗಿದೆ. ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳು ಈ ವಿಚಾರದಲ್ಲಿ ತಮ್ಮ ಕಳವಳವನ್ನು ಹಲವು ಬಾರಿ ವ್ಯಕ್ತಪಡಿಸಿವೆ.

ಆದರೆ, ಕೇಂದ್ರ ಸರ್ಕಾರ 1971ರ ಜನಗಣತಿಯನ್ನೇ ಆಧಾರವಾಗಿಟ್ಟುಕೊಂಡು ಸ್ಥಾನ ಹೆಚ್ಚಳಕ್ಕೆ ಮುಂದಾಗಿದ್ದು, ಇದರಿಂದ ಎಲ್ಲ ರಾಜ್ಯಗಳಿಗೂ ಏಕರೂಪವಾಗಿ ಅನ್ವಯಿಸುವ ಮೂಲಕ ದಕ್ಷಿಣ ಭಾರತದ ರಾಜ್ಯಗಳ ಆತಂಕವನ್ನು ನಿವಾರಿಸಲು ಪ್ರಯತ್ನಿಸಲಾಗುತ್ತಿದೆ.

ಮಹಿಳಾ ಮೀಸಲಾತಿ:
ಮಹಿಳೆಯರಿಗೆ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಶೇ.33ರಷ್ಟು ಮೀಸಲಾತಿ ನೀಡುವ ಕಾಯ್ದೆ ಈಗಾಗಲೇ ಅಂಗೀಕಾರವಾಗಿದೆ. ಆದರೆ ಕ್ಷೇತ್ರ ಮರುವಿಂಗಡಣೆ ಮತ್ತು ಜನಗಣತಿ ಪ್ರಕ್ರಿಯೆ ಪೂರ್ಣಗೊಂಡ ನಂತರವೇ ಜಾರಿಗೆ ಬರಬೇಕಿದೆ. ಈಗ 2029ರ ಲೋಕಸಭಾ ಚುನಾವಣೆಯಿಂದಲೇ ಮಹಿಳಾ ಮೀಸಲಾತಿ ಜಾರಿಗೆ ತರಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಈಗಿನ ಬೆಳವಣಿಗೆಯನ್ನು ಗಮನಿಸಿದರೆ ಈ ಕ್ಷೇತ್ರ ಮರುವಿಂಗಡಣೆಯಲ್ಲಿ ಶೇ.50ರಷ್ಟು ಸ್ಥಾನಗಳು ಏರಿಕೆಯಾಗುವಾಗ ಮಹಿಳೆಯರಿಗೂ ಅದರಲ್ಲಿ ಹೆಚ್ಚಿನ ಪ್ರಾತಿನಿಧ್ಯ ಸಿಗುವ ನಿರೀಕ್ಷೆ ಇದೆ.

ಕಾಂಗ್ರೆಸ್‌ ವಿಪ್ ಜಾರಿ
ಕೇಂದ್ರ ಸರ್ಕಾರ ಕ್ಷೇತ್ರ ಮರುವಿಂಗಡಣೆಯ ವಿಧೇಯಕವನ್ನು ಮತ್ತೆ ಮಂಡಿಸಲು ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ವಿರೋಧ ಪಕ್ಷಗಳು ಒಗ್ಗಟ್ಟಿನ ಹೋರಾಟಕ್ಕೆ ಮುಂದಾಗಿವೆ.ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ತಮ್ಮ ನಿವಾಸದಲ್ಲಿ ವಿರೋಧ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ. ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಎದುರಿಸಲು ಜಂಟಿ ಕಾರ್ಯತಂತ್ರ ರೂಪಿಸುವುದು ಸಭೆಯ ಪ್ರಮುಖ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಪಕ್ಷವು ತನ್ನ ಎಲ್ಲಾ ಸಂಸದರು ಸೋಮವಾರದಿಂದ ಲೋಕಸಭೆಯಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ವಿಪ್ ಜಾರಿ ಮಾಡಿದೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಕೇಂದ್ರದ ಈ ಕ್ರಮವನ್ನು ಬಿಜೆಪಿಯ ಅತಿದೊಡ್ಡ ತಪ್ಪು ಎಂದು ಟೀಕಿಸಿದ್ದಾರೆ. ಮುಂದಿನ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ನಡೆಯಲಿದ್ದು, ರಾಜಕೀಯ ಲಾಭಕ್ಕಾಗಿ ಬಿಜೆಪಿ ಕ್ಷೇತ್ರ ಮರುವಿಂಗಡಣೆ ವಿಚಾರವನ್ನು ಬಳಸಿಕೊಳ್ಳುತ್ತಿದೆ ಎಂಬುದು ಅವರ ಆರೋಪವಾಗಿದೆ.

ರಾಜ್ಯಸಭಾ ಸದಸ್ಯ ಹಾಗೂ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಪ್ರಸ್ತಾವಿತ 131ನೇ ಸಂವಿಧಾನ ತಿದ್ದುಪಡಿ ಮಸೂದೆಯ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿ, ಕ್ಷೇತ್ರ ಮರುವಿಂಗಡಣೆ, ಪಕ್ಷಾಂತರ ಮತ್ತು ಸಂಸತ್ತಿನ ರಚನೆಯಲ್ಲಿ ಬದಲಾವಣೆಗಳ ಮೂಲಕ ಬಿಜೆಪಿ ತನ್ನ ರಾಜಕೀಯ ಅಧಿಕಾರವನ್ನು ಬಲಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂಬ ಆರೋಪ ಮಾಡಿದ್ದಾರೆ.

ಹೇಗಿದೆ ಬಲಾಬಲ ಲೆಕ್ಕಾಚಾರ?
ಕೇಂದ್ರ ಸರ್ಕಾರ ಕ್ಷೇತ್ರ ಮರುವಿಂಗಣೆಯ ವಿಧೇಯಕವನ್ನು ಏಪ್ರಿಲ್‌ನಲ್ಲಿ ಮಂಡಿಸಿದಾಗ ಸೋಲಾಗಿತ್ತು. ಕಾರಣ ಅಂಗೀಕಾರಕ್ಕೆ 352 ಮತಗಳ ಅಗತ್ಯವಿತ್ತು. ಅಂದರೆ ಲೋಕಸಭೆಯ ಮೂರನೇ ಎರಡರಷ್ಟು ಬಹುಮತ ಸಿಗಬೇಕಿದೆ. ಆಗ 528 ಸದಸ್ಯರು ಮತದಾನದಲ್ಲಿ ಭಾಗವಹಿಸಿದ್ದರು. ಮಸೂದೆಯ ಪರವಾಗಿ 298 ಮತಗಳು ಮತ್ತು ವಿರುದ್ಧವಾಗಿ 230 ಮತಗಳು ಬಂದಿದ್ದವು. ಅಂಗೀಕಾರಕ್ಕೆ 352 ಮತಗಳ ಬಾರದ ಕಾರಣ ಕೇಂದ್ರ ಸರ್ಕಾರಕ್ಕೆ ಸೋಲಾಗಿತ್ತು.

ಆದರೆ, ಈ ಬಾರಿ ಟಿಎಂಸಿ ಉಚ್ಛಾಟಿತ ಸಂಸದರು, ಉದ್ದವ್ ಬಣದ ಶಿವಸೇನೆ ಸಂಸದರು, ಶಿರೋಮಣಿ ಅಕಾಲಿ ದಳ ಬಿಜೆಪಿ ಬೆಂಬಲಿಸಿದೆ. ಇದರ ಜೊತೆಗೆ ತಮಿಳುನಾಡಿನ ಡಿಎಂಕೆ, ಶರದ್‌ಪವಾರ್ ಬಣದ ಎನ್‌ಸಿಪಿ ಮತ್ತು ವೈಎಸ್‌ಆರ್‌ ಕಾಂಗ್ರೆಸ್ ಹಲವು ಷರತ್ತುಗಳೊಂದಿಗೆ ವಿಧೇಯಕ ಬೆಂಬಲಿಸಲು ನಿರ್ಧರಿಸಿವೆ. ಈ ಹಿನ್ನೆಲೆಯಲ್ಲಿ ಈ ಬಾರಿ ವಿಧೇಯಕದ ಅಂಗೀಕಾರಕ್ಕೆ ಬೇಕಾದ ಮತಗಳನ್ನು ಪಡೆಯುವಲ್ಲಿ ಎನ್‌ಡಿಎ ತಂತ್ರ ಕುತೂಹಲ ಮೂಡಿಸಿದೆ.

More articles

Latest article

Most read