ವರಿಷ್ಠರು ಹೇಳಿದಾಗ ಸಂಪುಟ ವಿಸ್ತರಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ  ನೀಡಿದಾಗ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ತಮ್ಮ ನಿವಾಸ ಕಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಇರಾದೆ ಸಧ್ಯಕ್ಕಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಅಧಿಕಾರ ಹಸ್ತಾಂತರ, ಸಂಪುಟ ವಿಸ್ತರಣೆ ಕುರಿತ ಎಲ್ಲಾ ಗೊಂದಲಗಳಿಗೆ  ಮುಕ್ತಾಯ  ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು. ಶಾಸಕರ ಮತ್ತೊಂದು ತಂಡ ದೆಹಲಿಗೆ ಭೇಟಿ ನೀಡಿರುವ ಬಗ್ಗೆ ಮಾತನಾಡಿ ಹೈ ಕಮಾಂಡ್ ಅವರನ್ನು ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ಎಂದು ನೋಡೋಣ ಎಂದರು.

ಇನ್ನು ಮುಂದೆ ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು . ಮೂಲತ: ಮೈಸೂರು ಜಿಲ್ಲೆಯವರಾದ ಕುಮಾರ ಎಂಬುವರು ಅಮೆರಿಕಾದಲ್ಲಿ ನೆಲೆಸಿದ್ದು, ನಂದಿನಿ ಏಜೆನ್ಸಿ ಪಡೆದಿದ್ದು, ಅವರಿಗೆ ಶುಭವಾಗಲಿ ಎಂದು ಹಾರೈಸಿದರು.

More articles

Latest article

Most read