ಸಂಪುಟ ವಿಸ್ತರಣೆ: ಮಾಧ್ಯಮಗಳೇ ಉತ್ತರಿಸಬೇಕು, ನಾನಲ್ಲ;ಸಿದ್ದರಾಮಯ್ಯ

Most read

ನವದೆಹಲಿ: ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ಕುರಿತಾದ ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಮಾಧ್ಯಮಗಳೇ ಹೊರತು ನಾನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸಂಪುಟ ವಿಸ್ತರಣೆ, ಪುನಾರಚನೆ ಉದ್ದೇಶ ಸಧ್ಯಕ್ಕಿಲ್ಲ ಎಂದರು.

ಮಾಧ್ಯಮಗಳೇ ಈ ಬಗ್ಗೆ ಸುದ್ದಿಗಳನ್ನು ಬಿತ್ತರಿಸುತ್ತಿವೆ. ಸಂಭವನೀಯ ಸಚಿವರ ಪಟ್ಟಿಯನ್ನೂ ಪ್ರಕಟಿಸುತ್ತಿವೆ. ಹೀಗಾಗಿ ಪುನಾರಚನೆ, ವಿಸ್ತರಣೆ ಕುರಿತಾದ ಪ್ರಶ್ನೆಗಳಿಗೆ ಮಾಧ್ಯಮಗಳೇ ಉತ್ತರಿಸಬೇಕು.  ಸಂಪುಟ ಪುನಾರಚನೆ, ವಿಸ್ತರಣೆ ಕುರಿತಂತೆ ರಾಹುಲ್ ಗಾಂಧಿ ಅಥವಾ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ಮಾಡಿಲ್ಲ. ನಾಗೇಂದ್ರ ಅವರು ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ. ಆದರೆ ಈಗಲೇ ಅಲ್ಲ ಎಂದು ಹೇಳಿದರು.

ಹಾಸನದಲ್ಲಿ ಡಿಸೆಂಬರ್ 5ರಂದು ಕಾಂಗ್ರೆಸ್ ಪಕ್ಷ ಹಾಗೂ ಹಿಂದುಳಿದ ವರ್ಗಗಳ ಒಕ್ಕೂಟದ ಆಶ್ರಯದಲ್ಲಿ ಸ್ವಾಭಿಮಾನಿ ಸಮಾವೇಶ ಅಯೋಜಿಸಲಾಗಿದೆ. ಸಮಾವೇಶಕ್ಕೆ ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನೂ ಸಂಘಟಕರು ಆಹ್ವಾನಿಸಿದ್ದಾರೆ. ಸಮಾವೇಶ ಕುರಿತಂತೆ ಹೈಕಮಾಂಡ್ ಗೆ ಅನಾಮಧೇಯ ಪತ್ರ ಬರೆದಿರುವ ಬಗ್ಗೆ ಮಾಹಿತಿ ಇಲ್ಲ. ಖರ್ಗೆ ಅವರೂ ಈ ಬಗ್ಗೆ ಚರ್ಚೆ ಮಾಡಲಿಲ್ಲ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ವಾಪಸ್ ತೆರಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾರ್ಗ ಮಧ್ಯೆ ಗಮನಿಸಿದ ದೆಹಲಿಯಲ್ಲಿ ನೆಲೆಸಿರುವ ಕನ್ನಡದ ದಂಪತಿ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ ಕ್ಷಣ

More articles

Latest article