Saturday, December 7, 2024

ಸಂವಿಧಾನದ ಪೀಠಿಕೆಯಿಂದ  ‘ಸಮಾಜವಾದ’ ಮತ್ತು ‘ಜಾತ್ಯತೀತ’ ಪದಗಳನ್ನು ತೆಗೆಯಲು ಸುಪ್ರೀಂ ನಕಾರ

Most read

ನವದೆಹಲಿ: ಸಂವಿಧಾನದ ಪೀಠಿಕೆಯಲ್ಲಿ ಸಮಾಜವಾದ ಮತ್ತು ಜಾತ್ಯಾತೀತ ಎಂಬ ಪದಗಳನ್ನು ಸೇರಿಸಿದ 1976ರಲ್ಲಿ ತಿದ್ದುಪಡಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ.

1976ರಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ 42ನೇ ತಿದ್ದುಪಡಿ ಮೂಲಕ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಎಂಬ ಪದಗಳನ್ನು ಸಂವಿಧಾನದ ಪೀಠಿಕೆಯಲ್ಲಿ ಸೇರಿಸಲಾಗಿತ್ತು. ಈ ಸೇರ್ಪಡೆಯನ್ನು ಪ್ರಶ್ನಿಸಿ ಪ್ರಶ್ನಿಸಿ ಬಿಜೆಪಿ ಹಿರಿಯ ಮುಖಂಡ ಡಾ.ಸುಬ್ರಮಣಿಯನ್ ಸ್ವಾಮಿ, ಬಲರಾಮ್ ಸಿಂಗ್ ಹಾಗೂ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಗಳನ್ನು ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ನ್ಯಾಯಪೀಠ ತೀರ್ಪನ್ನು ನವೆಂಬರ್ 22ರಂದು ಕಾಯ್ದಿರಿಸಿತ್ತು. ಈ ಅರ್ಜಿಗಳ ಬಗ್ಗೆ ವಿವರವಾದ ವಿಚಾರಣೆ ನಡೆಸುವ ಅಗತ್ಯವಿಲ್ಲ ಎಂದು ಸಿಜೆಐ ಸಂಜೀವ್ ಖನ್ನಾ ನೇತೃತ್ವದ ಪೀಠ ತಿಳಿಸಿದೆ.

ಸಂವಿಧಾನವನ್ನು ತಿದ್ದುಪಡಿ ಮಾಡುವ ಅಧಿಕಾರ ಸಂಸತ್ತಿಗೆ ಇದೆ. ತಿದ್ದುಪಡಿಯಾಗಿ ಹಲವು ವರ್ಷಗಳು ಕಳೆದಿದ್ದು, ಈಗ ಅದನ್ನು ರದ್ದುಪಡಿಸಲಾಗದು ಎಂಬುದನ್ನು ಈಗಾಗಲೇ ವಿವರಿಸಲಾಗಿದೆ ಎಂದು ಹೇಳಿ ಅರ್ಜಿಯನ್ನು ಪೀಠ ವಜಾಗೊಳಿಸಿತು.

More articles

Latest article