ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಗೆ ಕಾರು ಡಿಕ್ಕಿ; ಜಾತ್ರೆಗೆ ಹೊರಟಿದ್ದ ನಾಲ್ವರು ಸ್ನೇಹಿತರ ದುರ್ಮರಣ

Most read

ಬಾಗಲಕೋಟೆ: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ಭೀಕರ ಅಪಘಾತ ಬಾಗಲಕೋಟೆ-ವಿಜಯಪುರ ಹೆದ್ದಾರಿಯ ಸಿದ್ದಾಪುರ ಗ್ರಾಮದ ಹತ್ತಿರ ಸಂಭವಿಸಿದೆ. ಸಿದ್ದಾಪುರ ಗ್ರಾಮದ ವಿಶ್ವನಾಥ ಕಂಬಾರ(17), ಗಣೇಶ್ ಅರಳಿಮಟ್ಟಿ(20), ಪ್ರವೀಣ ಶೇಡಬಾಳ(22) ಪ್ರಜ್ವಲ್ ಶೇಡಬಾಳ(17) ಮೃತರು. ಇವರೆಲ್ಲರೂ ಸ್ನೇಹಿತರಾಗಿದ್ದು, ಶಿರೋಳ ಕಾಡಸಿದ್ಧೇಶ್ವರ ದೇವರ ಜಾತ್ರೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಗ್ರಾಮದ ಬಳಿ ಟ್ರ್ಯಾಕ್ಟರ್‌ ವೊಂದು ಕಬ್ಬು ಸಾಗಿಸುತ್ತಿತ್ತು. ಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಹತ್ತಿರ ಮಧ್ಯ ರಾತ್ರಿ 12.30ಕ್ಕೆ ಈ ಅಪಘಾತ ಸಂಭವಿಸಿದೆ. ಕಾರು ಹಿಂಬದಿಯಿಂದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ ಎಂದು ಜಮಖಂಡಿ ಗ್ರಾಮೀಣ ಪೊಲೀಸರು ತಿಳಿಸಿದ್ದಾರೆ.

More articles

Latest article