ಬೆಂಗಳೂರಿನಲ್ಲಿ ಕಂಬಳ: ತಡೆ ನೀಡಲು ಹೈ ಕೋರ್ಟ್ ಮೊರೆ ಹೋದ ಪೇಟಾ; ನಾಳೆ ವಿಚಾರಣೆ

Most read

ಇದೇ ಅಕ್ಟೋಬರ್ 26ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ಕಂಬಳ ಸ್ಪರ್ಧೆಯನ್ನು ನಿಲ್ಲಿಸುವಂತೆ ಪ್ರಾಣಿ ದಯಾ ಸಂಘ ಪೇಟಾ ರಾಜ್ಯ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ಈ ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸುವಂತೆ ಸೋಮವಾರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಅವರು ಹೈಕೋರ್ಟ್
ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ
ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ
ಪೀಠಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಸಾಂಪ್ರಾದಾಯಿಕವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಬಳವನ್ನು ನಡೆಸಲಾಗುತ್ತದೆ. ಅದೇ ಮಾದರಿಯಲ್ಲಿ ಬೆಂಗಳೂರಿನಲ್ಲಿಯೂ ಕಂಬಳ ಆಯೋಜಿಸಲು ನಿರ್ಧರಿಸಲಾಗಿದೆ. ಈ ಕಂಬಳಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಕೋಣಗಳನ್ನು ಕರೆತರಲಾಗುತ್ತದೆ. ಕಂಬಳ ಪ್ರಾಣಿ ಹಿಂಸಾ ಕ್ರೀಡೆಯಾಗಿದೆ ಎಂದು ಪೇಟಾ ಅರ್ಜಿಯಲ್ಲಿ ತಿಳಿಸಿದೆ.
ಕೆಲವೇ ದಿನಗಳಲ್ಲಿ ಅಕ್ಟೋಬರ್ 26ಕ್ಕೆ ಕಂಬಳ ಸ್ಪರ್ಧೆ ನಡೆಯುತ್ತಿದ್ದು ಅಂತಿಮ ಕ್ಷಣದಲ್ಲಿ ನ್ಯಾಯಾಲಯದ ಮುಂದೆ ಬಂದಿರುವುದೇಕೆ ಎಂದು ನ್ಯಾಯಪೀಠ ಪ್ರಶ್ನಿಸಿದೆ.

ಆಗ ವಕೀಲ ಧ್ಯಾನ್ ಚಿನ್ನಪ್ಪ ಅವರು ಈ ಸಂಬಂಧ ಜುಲೈನಲ್ಲಿಯೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದ್ದು, ಇನ್ನೂ ವಿಚಾರಣೆಗೆ ಬಂದಿಲ್ಲ.
ಈಗ ಅ. 26ಕ್ಕೆ ಕಂಬಳ ಸ್ಪರ್ಧೆ ನಿಗದಿಯಾಗಿದ್ದು, ತುರ್ತು ವಿಚಾರಣೆ ನಡೆಸಬೇಕು ಎಂದು ಕೋರಿದರು.
ಇವರ ವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ನಾಳೆ ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ಕರ್ನಾಟಕದ ಕಂಬಳ, ತಮಿಳುನಾಡಿನ ಜಲ್ಲಿಕಟ್ಟು, ಮಹಾರಾಷ್ಟ್ರದ ಎತ್ತಿನಗಾಡಿ ಓಟಕ್ಕೆ
ಅವಕಾಶ ನೀಡುವ ಕಾನೂನನ್ನು ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು ಕಳೆದ ವರ್ಷದ ಮೇನಲ್ಲಿ ಎತ್ತಿಹಿಡಿದಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

More articles

Latest article