ರಾಹುಲ್ ಗಾಂಧಿ ವಿರುದ್ಧದ ಪ್ರಕರಣ ಕ್ರೈಂ ವಿಭಾಗಕ್ಕೆ ವರ್ಗಾವಣೆ

Most read

ನವದೆಹಲಿ:ಕೇಂದ್ರ ಗೃಹ ಸಚಿವ  ಅಮಿತ್ ಶಾ ವಿರುದ್ಧ ಸಂಸತ್ತಿನ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ, ಇಬ್ಬರು ಬಿಜೆಪಿ ಸಂಸದರು ಗಾಯಗೊಂಡಿರುವ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ದೆಹಲಿ ಪೊಲೀಸರು ಅಪರಾಧ ವಿಭಾಗಕ್ಕೆ ವರ್ಗಾಯಿಸಿದ್ದಾರೆ. ವರ್ಗಾಯಿಸಿದ್ದಾರೆ.

ಕಾಂಗ್ರೆಸ್‌ ಬಿಜೆಪಿ ಸದಸ್ಯರ ತಳ್ಳಾಟದಲ್ಲಿ ಬಿಜೆಪಿಯ ಪ್ರತಾಪ್ ಚಂದ್ರ ಸಾರಂಗಿ ಮತ್ತು ಮುಖೇಶ್ ರಜಪೂತ್ ಗಾಯಗೊಂಡಿದ್ದರು. ದೈಹಿಕ ಹಲ್ಲೆ ಮತ್ತು ಪ್ರಚೋದನೆ ಆರೋಪದ ಅಡಿಯಲ್ಲಿ ಬಿಜೆಪಿ ರಾಹುಲ್‌  ಗಾಂಧಿ ವಿರುದ್ಧ ದೂರು ನೀಡಿತ್ತು. ಸಂಸತ್ ಸ್ಟ್ರೀಟ್ ಪೊಲೀಸ್‌ನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಸದನವನ್ನು ಪ್ರವೇಶಿಸುವ ಪ್ರಯತ್ನದಲ್ಲಿ ಗಾಂಧಿ ಅವರನ್ನು ತಳ್ಳಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಇಬ್ಬರೂ ಸಂಸದರನ್ನು ದೆಹಲಿಯ ಆರ್‌ಎಂಎಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾರತೀಯ ನ್ಯಾಯ ಸಂಹಿತೆಯ  ಅಡಿಯಲ್ಲಿ ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು, ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟು ಮಾಡುವ ಕೃತ್ಯ), ಅಪರಾಧ ಬೆದರಿಕೆ ಅಡಿಯಲ್ಲಿ ಎಫ್‌ ಐಆರ್‌ ದಾಖಲಿಸಲಾಗಿದೆ. ಪ್ರಕರಣವನ್ನು ಸ್ಥಳೀಯ ಪೊಲೀಸರಿಂದ ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಿದ್ದೇವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸರು ಸಾರಂಗಿ ಮತ್ತು ಮುಖೇಶ್ ರಜಪೂತ್ ಅವರ ಹೇಳಿಕೆಗಳನ್ನು ಪಡೆಯಲಿದ್ದಾರೆ. ರಾಹುಲ್ ಗಾಂಧಿ ಅವರನ್ನೂ ವಿಚಾರಣೆಗೆ ಕರೆಯಲಿದ್ದಾರೆ.

ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ತಳ್ಳಿ ಗಾಯೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ ಸಿಂಗ್, ರಾಜೀವ್ ಶುಕ್ಲಾ, ಮುಕುಲ್ ವಾಸ್ನಿಕ್, ಪ್ರಮೋದ್ ತಿವಾರಿ ಸೇರಿದಂತೆ ಕಾಂಗ್ರೆಸ್ ಸಂಸದರ ನಿಯೋಗ ಬಿಜೆಪಿ ವಿರುದ್ಧ ದೂರು ದಾಖಲಿಸಿದೆ.

More articles

Latest article