ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಪಕ್ಷದ ವಿಪಕ್ಷ ನಾಯಕ ಆರ್. ಅಶೋಕ್, ಶಾಸಕ ಅರವಿಂದ ಬೆಲ್ಲದ್, ಮಹೇಶ್ ಟೆಂಗಿನಕಾಯಿ ಸೇರಿ 42 ಜನರ ವಿರುದ್ಧ FIR ದಾಖಲಾಗಿದೆ.
ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಯ ಮುಂದೆ ಗಲಭೆ ಆರೋಪಿ ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಬಿಜೆಪಿ ನಾಯಕರಿಂದ ಪ್ರತಿಭಟನೆ ನಡೆಸಲಾಗಿತ್ತು.ಹೀಗೆ ಪ್ರತಿಭಟನೆ ನಡೆಸಿದಂತ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ 43 ಮಂದಿ ವಿರುದ್ಧ ಕಾಂಗ್ರೆಸ್ ನಿಯೋಗ ಪೊಲೀಸರಿಗೆ ದೂರು ನೀಡಿತ್ತು. ಇದನ್ನು ಆದರಿಸಿ ಪ್ರತಿಭಟನೆ ನಡೆಸುತ್ತಿದ್ದ ೪೨ ಮಂದಿ ವಿರುದ್ಧ ಪೊಲೀಸರು ಎಫ್ ಐ ಆರ್ ದಾಖಲು ಮಾಡಿದ್ದಾರೆ.
ಬಾಬ್ರಿ ಮಸೀದಿ ದ್ವಂಸ ಸಂದರ್ಭದಲ್ಲಿ ಹುಬ್ಬಳ್ಳಿಯಲ್ಲಿ ಹಿಂಸಾಚಾರಕ್ಕೆ ಕಾರಣರಾದ ಹಲವರನ್ನು ಬಂಧಿಸಿದ್ದು ಅದರಲ್ಲಿ ಶ್ರೀಕಾಂತ್ ಪೂಜಾರಿ ಕೂಡ ಒರ್ವ. ಈತ ನಮ್ಮ ಕರಸೇವಕ ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿ ಬಂಧನ ವಿರೋಧಿಸಿ ಪ್ರತಿಭಟನೆ ನಡೆಸುತ್ತಿತ್ತು. ಈಗ ಕಾಂಗ್ರೆಸ್ ದೂರಿನ ಹಿನ್ನೆಲೆ FIR ದಾಖಲಾಗಿದೆ.