ರಾಷ್ಟ್ರೀಯ ಕ್ರೀಡಾಕೂಟಗಳ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ:ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಕ್ರೀಡಾಕೂಟಗಳ  ಪದಕ ವಿಜೇತರಿಗೆ ನಗದು ಪುರಸ್ಕಾರವನ್ನು ಹೆಚ್ಚಿಸಿ, ಚಿನ್ನ ಪದಕ ವಿಜೇತರಿಗೆ 7 ಲಕ್ಷ ರೂ, ಬೆಳ್ಳಿ ಪದಕ ವಿಜೇತರಿಗೆ 5 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 3 ಲಕ್ಷ ರೂ. ನೀಡಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ 38ನೇ ರಾಷ್ಟ್ರೀಯ ಕ್ರೀಡಾಕೂಟದ ವಿವಿಧ ಕ್ರೀಡಾ ವಿಭಾಗಗಳಲ್ಲಿ ಭಾಗವಹಿಸಿ ಪದಕಗಳನ್ನು ಪಡೆದ ಕ್ರೀಡಾ ಪಟುಗಳಿಗೆ ನೇರ ನಗದು ಪುರಸ್ಕಾರ ಪ್ರದಾನ ಮಾಡಿ ಮಾತನಾಡಿದರು.

ಉತ್ತರಾಖಂಡದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳು ರಾಜ್ಯಕ್ಕೆ ಐದನೇ ಸ್ಥಾನವನ್ನು ದೊರಕಿಸಿಕೊಟ್ಟಿದ್ದು, ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಕ್ರೀಡಾಕೂಟದಲ್ಲಿ ರಾಜ್ಯದ ಕ್ರೀಡಾಪಟುಗಳು 34 ಚಿನ್ನ, 18 ಬೆಳ್ಳಿ ಹಾಗೂ 28 ಕಂಚಿನ ಪದಕಗಳನ್ನು ಗೆದ್ದಿರುವುದು ನಮಗೆಲ್ಲ ಹೆಮ್ಮೆಯ ವಿಷಯ ಎಂದು  ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದರು.

More articles

Latest article

Most read