ಮತ್ತೆ ಜಾತಿಗಣತಿ ನಡೆಸಲು ಸಚಿವ ಸಂಪುಟ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ ಘೋಷಣೆ

Most read

ಬೆಂಗಳೂರು: ರಾಜ್ಯದಲ್ಲಿ ಮತ್ತೊಮ್ಮೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಜನಗಣತಿ) ನಡೆಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.

ಕಾಂತರಾಜು ಅವರ ಆಯೋಗ ವರದಿ ಸಲ್ಲಿಸಿ 10 ವರ್ಷ ಕಳೆದಿದೆ. ಹಿಂದುಳಿದ ವರ್ಗಗಳ ಆಯೋಗದ ಕಾಯ್ದೆ ಸೆ.11ರ ಪ್ರಕಾರ 10 ವರ್ಷ ಆದ ಬಳಿಕ ಹೊಸ ಸಮೀಕ್ಷೆ ನಡೆಸಬೇಕು ಎಂದು ಹೇಳಿದೆ. ಅಲ್ಲದೆ ಹೈಕಮಾಂಡ್ ಕೂಡಾ ಸಲಹೆ ನೀಡಿದೆ ಎಂದು ಅವರು ಹೇಳಿದ್ದಾರೆ.

2011ರಲ್ಲಿ ಅಂದು ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ ಅವರೇ ಜಾತಿ ಗಣತಿ ಸಮೀಕ್ಷೆಗೆ ಆದೇಶನೀಡಿದ್ದರು. ಮನೆಮನೆಗೆ ಹೋಗಿ ಸಮೀಕ್ಷೆ ನಡೆಸಲಾಗಿತ್ತು. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕಾಂತರಾಜು ಅವರು ಸಮೀಕ್ಷೆಯ ನೇತೃತ್ವ ವಹಿಸಿದ್ದರು. ನಂತರ ಅಧ್ಯಕ್ಷರಾಗಿದ್ದ ಜಯಪ್ರಕಾಶ್ 2024ರ ಫೆ.29ರಂದು ಸರ್ಕಾರಕ್ಕೆ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಲೋಕಸಭಾ ಚುನಾವಣೆ ಕಾರಣದಿಂದ ವರದಿ ಕುರಿತು ಚರ್ಚೆ ನಡೆದಿರಲಿಲ್ಲ.  ನಂತರ ಈ ವರ್ಷದ ಆರಂಭದಲ್ಲಿ ಸಚಿವ ಸಂಪುಟದಲ್ಲಿ ಚರ್ಚೆ ಆರಂಭಿಸಿತ್ತು.

More articles

Latest article