ಚರ್ಚೆಯಾಗದ ಜಾತಿಗಣತಿ ವರದಿ ; ಮುಂದಿನ ಸಂಪುಟ ಸಭೆಯಲ್ಲಿ  ತೀರ್ಮಾನ?

Most read

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಧಾರಿತ ಜಾತಿ ಗಣತಿ ವರದಿ ಅನುಷ್ಠಾನ ಕುರಿತು ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ. ಈ ವರದಿ ಕುರಿತು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆಯಾದರೂ ಅಂತಿಮವಾಗಿ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲು ತೀರ್ಮಾನಿಸಲಾಗಿದೆ.

 ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ಲಕೋಟೆ ಓಪನ್ ಮಾಡಲಾಗಿದೆ. ಸಚಿವರು ಅಭಿಪ್ರಾಯ ಮಂಡಿಸಿದ ನಂತರ ಸಿದ್ದರಾಮಯ್ಯ, ಅವರು ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ನಿರ್ಧಾರಕ್ಕೆ ಬಂದರು ಎನ್ನಲಾಗಿದೆ.

ಜನ ಗಣತಿ ಸಮೀಕ್ಷಾ ವರದಿಯನ್ನು 2024ರ ಫೆಬ್ರವರಿಯಲ್ಲಿ ಮುಚ್ಚಿದ ಲಕೋಟೆಯಲ್ಲಿ ಸರ್ಕಾರಕ್ಕೆ ಸಲ್ಲಿಸಲಾಗಿತ್ತು.  ಅಂದಿನಿಂದ ಇದುವರೆಗೂ ಸರ್ಕಾರ ಈ ವರದಿಯನ್ನು ಒಪ್ಪಿಕೊಳ್ಳಲು ಮೀನಮೇಷ ಎಣಿಸುತ್ತಾ ಬಂದಿತ್ತು.

ಜನ ಗಣತಿ ಸಮೀಕ್ಷಾ ವರದಿ: ಏನಿದೆ?

ಪೆಟ್ಟಿಗೆ 1

  • 2015 ರ ಸಮೀಕ್ಷೆಯ ಸಮಗ್ರ ವರದಿ
  • ಜಾತಿವಾರು ಜನಸಂಖ್ಯಾ ವಿವರ – 1 ಸಂಪುಟ
  • ಜಾತಿ ವರ್ಗಗಳ ಪ್ರಮುಖ ಲಕ್ಷಣಗಳು (ಪರಿಶಿಷ್ಟ ಜಾತಿ)– 1 ಸಂಪುಟ
  • ಜಾತಿ ವರ್ಗಗಳ ಪ್ರಮುಖ ಲಕ್ಷಣಗಳು (ಪರಿಶಿಷ್ಟ ಪಂಗಡಗಳು)– 1 ಸಂಪುಟ
  • ಜಾತಿ, ವರ್ಗಗಳ ಪ್ರಮುಖ ಲಕ್ಷಣಗಳು (ಎಸ್‌ ಸಿ, ಎಸ್‌ ಟಿ ಬಿಟ್ಟು )– 7 ಸಂಪುಟಗಳು
  • ವಿಧಾನಸಭಾ ಕ್ಷೇತ್ರಗಳ ಜಾತಿವಾರು ಅಂಕಿ ಅಂಶಗಳು (2 ಸಿ.ಡಿಗಳು)
  • 2015 ರ ಸಮೀಕ್ಷೆಯ ‘ದತ್ತಾಂಶಗಳ ಅಧ್ಯಯನ ವರದಿ–2024’

ಪೆಟ್ಟಿಗೆ 2

  • ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಮಾಹಿತಿಯ ಜಾತಿ, ವರ್ಗವಾರು (ಎಸ್‌ ಸಿ, ಎಸ್‌ ಟಿ ಹೊರತುಪಡಿಸಿ )– 4 ಸಂಪುಟಗಳು
  • ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಮಾಹಿತಿಯ ಜಾತಿ, ವರ್ಗವಾರು (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು) – 1 ಸಂಪುಟ
  • ತಾಲ್ಲೂಕುವಾರು, ಜಾತಿವಾರು ಕುಟುಂಬಗಳು ಹಾಗೂ ಜನಸಂಖ್ಯೆಯ ವರದಿ– 30 ಸಂಪುಟಗಳು
  • ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಪ್ರಾತಿನಿಧ್ಯದ ಕುರಿತ ದ್ವಿತೀಯ ಮೂಲಗಳಿಂದ ಪಡೆದ ವಿವರಗಳು– 1 ಸಂಪುಟ

More articles

Latest article