ಜಾತಿಗಣತಿ: ಆನ್‌ ಲೈನ್‌ ಸಮೀಕ್ಷೆಗೆ ನವಂಬರ್‌ 30ರವರೆಗೆ ಅವಧಿ ವಿಸ್ತರಣೆ

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಂಡಿದ್ದು, ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವವರಿಗೆ ಅವಕಾಶ ನೀಡುವ ಹಿನ್ನೆಲೆಯಲ್ಲಿ Online ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಅವಧಿಯನ್ನು ದಿನಾಂಕ:10.11.2025 ರವರೆಗೆ ವಿಸ್ತರಿಸಲಾಗಿತ್ತು.

ಆದರೆ, ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಎಲ್ಲರಿಗೂ ಅವಕಾಶ ನೀಡುವ ದೃಷ್ಟಿಯಿಂದ Online ಮೂಲಕ https://kscbcselfdeclaration.karnataka.gov.in ಲಿಂಕ್‌ ಬಳಸಿಕೊಂಡು ಸಮೀಕ್ಷೆಯಲ್ಲಿ ಸ್ವಯಂ ಪಾಲ್ಗೊಳ್ಳುವ ಅವಧಿಯನ್ನು ಅಂತಿಮವಾಗಿ ದಿನಾಂಕ: 30.11.2025 ರವರೆಗೆ ವಿಸ್ತರಿಸಲಾಗಿದೆ ಎಂದು ಈ ಮೂಲಕ ಪ್ರಕಟಿಸಲಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ.

More articles

Latest article

Most read