ಜಾತಿ ಗಣತಿ ಅವಧಿ ವಿಸ್ತರಣೆ: ರಾಜ್ಯಾದ್ಯಂತ ಶಾಲಾ ಸಮಯವೂ ಬದಲಾವಣೆ

Most read

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸಲಾಗುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಶಿಕ್ಷಕರು ಭಾಗವಹಿಸುತ್ತಿರುವುದರಿಂದ ಸರ್ಕಾರಿ ಮತ್ತು ಅನುದಾನಿತ ಶಾಲಾ ತರಗತಿ ಸಮಯವನ್ನು ಮರು ನಿಗದಿಪಡಿಸಲಾಗಿದೆ. ರಾಜ್ಯಾದ್ಯಂತ ತರಗತಿಗಳನ್ನು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ ಹ್ನ 1 ಗಂಟೆಯವರೆಗೆ ನಿರ್ವಹಿಸುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ನಂತರದ ಅವಧಿಯಲ್ಲಿ ಸಮೀಕ್ಷೆಗೆ ನಿಯೋಜನೆಗೊಂಡಿರುವ ಶಿಕ್ಷಕರು ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸಬೇಕಾಗಿರುತ್ತದೆ.

ರಾಜ್ಯದಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಳ್ಳದಿರುವ ಕಾರಣದಿಂದ ಸಮೀಕ್ಷೆಯ ಅವಧಿಯನ್ನು ಅಕ್ಟೋಬರ್ 24ರವರೆಗೆ ವಿಸ್ತರಿಸಲಾಗಿದೆ.

ಸೆಪ್ಟೆಂಬರ್ 22ರಿಂದ ಜಾತಿ ಸಮೀಕ್ಷೆ ಆರಂಭಗೊಂಡಿದ್ದು, ಅಕ್ಟೋಬರ್ 7ಕ್ಕೆ ಪೂರ್ಣಗೊಳ್ಳಬೇಕಿತ್ತು. ಆದರೆ ಸಮೀಕ್ಷೆ ಮುಕ್ತಾಯವಾಗಿಲ್ಲವಾದ್ದರಿಂದ ಬೆಂಗಳೂರು ಹೊರತುಪಡಿಸಿ ರಾಜ್ಯದಲ್ಲಿ ಅ.12ರವರೆಗೆ ಸಮೀಕ್ಷೆ ದಿನಾಂಕ ವಿಸ್ತರಣೆ ಮಾಡಲಾಗಿದೆ. ರಾಜ್ಯದ ಇತರೆ ಭಾಗಗಳಲ್ಲಿ ಅಕ್ಟೋಬರ್ 8ರಿಂದ 12ರವರೆಗೆ ಶಾಲಾ ತರಗತಿ ಬೆಳಿಗ್ಗೆ 8ರಿಂದ ಅಪರಾಹ್ನ 1 ಗಂಟೆಯವರೆಗೆ ನಡೆಯಲಿವೆ. ರಜಾ ದಿನಗಳಲ್ಲಿಯೂ ಸಮೀಕ್ಷೆಯಲ್ಲಿ ಭಾಗವಹಿಸಿ ಅಕ್ಟೋಬರ್ 12ರೊಳಗೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.

ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಜಾತಿಗಣತಿ ತಡವಾಗಿ ಆರಂಭವಾಗಿರುವುದರಿಂದ ಅಕ್ಟೋಬರ್ 8ರಿಂದ 24ರವರೆಗೆ ಶಾಲಾ ತರಗತಿಗಳು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ1 ಗಂಟೆಯವರೆಗೆ ನಡೆಯಲಿವೆ.

More articles

Latest article