CATEGORY

ಅಪರಾಧ

ನಂಗಲಿ ಪೊಲೀಸರ ಕಾರ್ಯಾಚರಣೆ; 22 ಕೆ.ಜಿ ಶ್ರೀಗಂಧದ ಮರದ ತುಂಡು ಕಳವು ಮಾಡಿದ್ದ ಆರೋಪಿ ಬಂಧನ

ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ನಂಗಲಿ ಪೊಲೀಸರು ನೆರೆಯ ಆಂದ್ರ ಪ್ರದೇಶದ ರಾಮಕುಪ್ಪಂನ ರಾಜುಪೇಟೆ ನಿವಾಸಿ ರಾಜೇಶ್ ಎಂಬಾತನನ್ನು ಬಂಧಿಸಿ ಆತನಿಂದ ಸುಮಾರು 22 ಕೆಜಿ ತೂಕದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಪಿಚ್ಚಗುಂಟ್ಲಹಳ್ಳಿ ಗ್ರಾಮದ...

ತೆಲಂಗಾಣ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 10 ಕಾರ್ಮಿಕರ ಸಾವು

ಹೈದರಾಬಾದ್: ತೆಲಂಗಾಣದ ಸಂಗಾರೆಡ್ಡಿ ಜಲ್ಲೆಯ ಪಾಶಮೈಲರಾಮ್‌ ನಲ್ಲಿರುವ ಸಿಗಾಚಿ ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಕನಿಷ್ಠ 10 ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು 20ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಿಯಾಕ್ಟರ್‌...

ತ್ರಿಭಾಷಾ ಸೂತ್ರ ಆದೇಶ ಹಿಂಪಡೆದ ಮಹಾರಾಷ್ಟ್ರ ಸರ್ಕಾರ; ಹಿಂದಿ ಕಲಿಕೆಗೆ ಬ್ರೇಕ್‌

ಮುಂಬೈ: ಮಹಾರಾಷ್ಟ್ರದ ಶಾಲೆಗಳಲ್ಲಿ ತ್ರಿಭಾಷಾ ಸೂತ್ರ ಅಳವಡಿಕೆಯ ಭಾಗವಾಗಿ 1ರಿಂದ 5ನೇ ತರಗತಿವರೆಗೆ ಹಿಂದಿಯನ್ನು ಭಾಷೆಯಾಗಿ ಪರಿಚಯಿಸಿದ್ದ ಪರಿಷ್ಕೃತ ಆದೇಶವನ್ನು ಹಿಂಪಡೆದಿರುವುದಾಗಿ ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ.  ಪ್ರತಿಪಕ್ಷಗಳಿಂದ ವ್ಯಾಪಕ ವಿರೋಧ ವ್ಯಕ್ತವಾದ ಕಾರಣ...

ರಿಪಬ್ಲಿಕ್ ಆಫ್ ಕಲಬುರಗಿ ಆರೋಪಕ್ಕೆ ಪ್ರಧಾನಿ ಮೋದಿ ಉತ್ತರ ನೀಡಿದ್ದಾರೆ; ಸಚಿವ ಖರ್ಗೆ ತಿರುಗೇಟು

ಬೆಂಗಳೂರು: ನಮ್ಮ “ಕಾಮ್ ಕಿ ಬಾತ್“ನ ಯಶಸ್ಸನ್ನು ಪ್ರಧಾನಿಯವರು “ಮನ್ ಕಿ ಬಾತ್” ನಲ್ಲಿ ಪ್ರಸ್ತಾಪಿಸಿದ್ದಾರೆ. ಕಲಬುರಗಿ ಮಹಿಳೆಯರಲ್ಲಿನ ಕೌಶಲ್ಯಕ್ಕೆ ಉತ್ತಮ ಮಾರುಕಟ್ಟೆ ಒದಗಿಸಿ ಮೌಲ್ಯವರ್ಧನೆಗೆ ಸಹಾಯಕವಾಗಿ ನಿಂತಿದ್ದು ಕಲಬುರಗಿಯ ಜಿಲ್ಲಾಡಳಿತ ಎಂದು...

ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ: ಬಾಗೇಪಲ್ಲಿಯ ಮೂವರ ಸಾವು, 6 ಜನರ ಸ್ಥಿತಿ ಗಂಭೀರ

ಅಮರಾವತಿ: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಇಂದು ಮುಂಜಾನೆ ಮಾರುತಿ ವ್ಯಾನ್‌ ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.  9 ಮಂದಿ ಗಾಯಗೊಂಡಿದ್ದು, ಆರು ಮಂದಿಯ ಸ್ಥಿತಿ ಗಂಭೀರವಾಗಿದೆ...

ದೇವನಹಳ್ಳಿ ಭೂಸ್ವಾದೀನ ವಿರೋಧಿಸಿ 4ರಂದು ನಾಡ ಉಳಿಸಿ ಸಮಾವೇಶ ನಡೆಸಲು ರೈತರ ತೀರ್ಮಾನ

ಬೆಂಗಳೂರು: ಬೆಂಗಳೂರು ಹೊರವಲಯದ ದೇವನಹಳ್ಳಿಯ ಚನ್ನರಾಯಪಟ್ಟಣದಲ್ಲಿ ರೈತರ ಕೃಷಿ ಭೂಮಿಯನ್ನು ಸ್ವಾದೀನಪಡಿಸಿಕೊಳ್ಳದಂತೆ ಆಗ್ರಹಿಸಿ ಜುಲೈ 4ರಂದು ನಗರದ ಫ್ರೀಡಂ ಪಾರ್ಕ್‌ ನಲ್ಲಿ ನಾಡ ಉಳಿಸಿ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಸಂಯುಕ್ತ ಹೋರಾಟ ಮತ್ತು...

ಪಾಕ್‌ ಗೆ ಆಪರೇಷನ್‌ ಸಿಂಧೂರ ಮಾಹಿತಿ ಹಂಚಿಕೊಳ್ಳುತ್ತಿದ್ದ ನೌಕಾಪಡೆ ಸಿಬ್ಬಂದಿ ಬಂಧನ

ಜೈಪುರ: ಪಾಕಿಸ್ತಾನ ಪರ ಗೂಡಾಚಾರಿಣಿಯಿಂದ ಹಣ ಪಡೆದು ಭಾರತದ ಭದ್ರತೆಗೆ ಸಂಬಂಧಿಸಿದ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದ ಆರೋಪದ ಮೇಲೆ ದೆಹಲಿಯ ನೌಕಾಪಡೆಯ ಪ್ರಧಾನ ಕಚೇರಿಯ ಉದ್ಯೋಗಿ ವಿಶಾಲ್‌ ಯಾದವ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಆಪರೇಷನ್‌...

ದೇವನಹಳ್ಳಿಯಲ್ಲಿ ಭುಗಿಲೆದ್ದ ರೈತರ ಹೋರಾಟ; ಜತೆ ಜುಲೈ 4 ರಂದು ಸಿಎಂ ನೇತೃತ್ವದಲ್ಲಿ ರೈತರ ಸಭೆ

ದೇವನಹಳ್ಳಿ: ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ಸಾವಿರಾರು ಎಕರೆ ಫಲವತ್ತಾದ ಕೃಷಿ ಭೂಮಿ ಸ್ವಾಧೀನಪಡಿಸಿಕೊಳ್ಳುವ ಅಧಿಸೂಚನೆ ಕೈ ಬಿಡುವಂತೆ ರೈತರು ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ. ಈ ಮಧ್ಯೆ ಮುಖ್ಯಮಂತ್ರಿ...

ರಾಜ್ಯದಲ್ಲಿ 15 ವಿವಿಧ ಔಷಧಗಳು, ಸೌಂದರ್ಯವರ್ಧಕಗಳ ಸಂಗ್ರಹ, ಮಾರಾಟ, ಬಳಕೆ ನಿಷೇಧ; ಸಚಿವ ದಿನೇಶ್‌ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಮಾರಾಟವಾಗುತ್ತಿರುವ 15 ವಿವಿಧ ಔಷಧಗಳು ಹಾಗೂ ಸೌಂದರ್ಯವರ್ಧಕಗಳು ಪ್ರಮಾಣೀಕೃತ ಗುಣಮಟ್ಟದಲ್ಲಿಲ್ಲ ಎಂದು ಕರ್ನಾಟಕದ ಔಷಧ ಪರೀಕ್ಷಾ ಪ್ರಯೋಗಾಲಯ ಅವುಗಳ ಮೇಲೆ ನಿಷೇಧ ಹೊರಡಿಸಿ ಆದೇಶಿಸಿದೆ. ಈ ವಿಚಾರವನ್ನು ಆರೋಗ್ಯ ಸಚಿವ ದಿನೇಶ್...

ಅಧ್ಯಕ್ಷ ಮಹೇಶ್‌ ಜೋಷಿ ವರ್ತನೆ ಖಂಡಿಸಿ ಕನ್ನಡ ಸಾಹಿತ್ಯ ಪರಿಷತ್‌ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ನೇ.ಭ. ರಾಮಲಿಂಗ ಶೆಟ್ಟಿ ರಾಜೀನಾಮೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಗೌರವ ಕಾರ್ಯದರ್ಶಿ ಹುದ್ದೆಗೆ ನೇ.ಭ. ರಾಮಲಿಂಗ ಶೆಟ್ಟಿ ರಾಜೀನಾಮೆ ನೀಡಿದ್ದಾರೆ. ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಷಿ ಎಂಅವರ ಕಾರ್ಯವೈಖರಿಗೆ ಬೇಸತ್ತು ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅವರು ಪ್ರಕಟಣೆಯಲ್ಲಿ...

Latest news