CATEGORY

ಬ್ರೇಕಿಂಗ್ ನ್ಯೂಸ್

ಬೆಂಗಳೂರಲ್ಲಿ ಡೆಂಗ್ಯುಗೆ 27 ವರ್ಷದ ಯುವಕ ಬಲಿ : ರಾಜ್ಯಾದ್ಯಂತ ಸಾವಿನ ಸಂಖ್ಯೆ ಏರಿಕೆ!

ಬೆಂಗಳೂರಿನ 27 ವರ್ಷದ ಯುವಕ ಡೆಂಗ್ಯು ಸೋಂಕಿನಿಂದಲೇ ಸಾವಿಗೀಡಾಗಿದ್ದಾರೆ.ಮೃತಪಟ್ಟ ಯುವಕ ಕಗ್ಗದಾಸಪುರದ ನಿವಾಸಿ ಎಂದು ಬಿಬಿಎಂಪಿ (BBMP) ಖಚಿತಪಡಿಸಿದೆ. ಕಳೆದ ಶುಕ್ರವಾರ ಎರಡು ಡೆಂಗ್ಯು ಶಂಕಿತ ಸಾವಿನ ಪ್ರಕರಣಗಳು ಸಂಭವಿಸಿದ್ದವು. ಇದರಲ್ಲಿ ಒಂದು ಸಾವು...

ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ

ತೈಲ ಮಾರುಕಟ್ಟೆ ಕಂಪನಿಗಳು ಜುಲೈ 1ರಿಂದ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಿದೆ. ದೆಹಲಿಯಲ್ಲಿ 19KG ವಾಣಿಜ್ಯ ಸಿಲಿಂಡರ್ ಬೆಲೆ 31 ರೂ. ಇಳಿಕೆಯಾಗಿದೆ. ಹೊಸ ಬೆಲೆ ಮಧ್ಯರಾತ್ರಿಯಿಂದಲೇ ಜಾರಿಗೆ...

ಉದ್ಯೋಗ ಚಳವಳಿ: ಕರವೇಯಿಂದ #jobsforkannadigas ಸತತ 24 ಗಂಟೆಗಳ ಎಕ್ಸ್ ಅಭಿಯಾನ

'ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ' ಎಂಬ ಚಳವಳಿ ಆರಂಭಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಜುಲೈ 1ರಂದು ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿದ್ದು ಇದಕ್ಕೆ ಪೂರಕವಾಗಿ ಸತತ 24 ಗಂಟೆಗಳ ಎಕ್ಸ್ (ಟ್ವಿಟರ್) ಅಭಿಯಾನಕ್ಕೆ...

ಜುಲೈ 1ರಿಂದ ಗ್ರಾಮ ಪಂಚಾಯತಿಗಳಲ್ಲಿ ಜನನ, ಮರಣ ನೋಂದಣಿ ಪ್ರಾರಂಭ: ಸಚಿವ ಪ್ರಿಯಾಂಕ್‌ ಖರ್ಗೆ

ಗ್ರಾಮೀಣ ಪ್ರದೇಶದಲ್ಲಿ ಜನನ ಹಾಗೂ ಮರಣ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ 30 ದಿನಗಳ ಒಳಗೆ ಜನನ-ಮರಣ ಘಟನೆಗಳನ್ನು ನೋಂದಾಯಿಸುವ ಸಲುವಾಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಕ...

ವಿನಯ್ ಕುಲಕರ್ಣಿ ಧಾರವಾಡ ಪ್ರವೇಶ ಆಸೆಗೆ ತಣ್ಣೀರು: ಮತ್ತೆ ನಿರಾಕರಿಸಿದ ಕೋರ್ಟ್

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಾಕ್ಷ್ಯ ನಾಶ ಆರೋಪಗಳಿರುವ ಶಾಸಕ ವಿನಯ್ ಕುಲಕರ್ಣಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಪ್ರವೇಶ ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ...

ಭಾರೀ ಮಳೆಗೆ ಗುಜರಾತ್‌ನ ರಾಜ್‌ಕೋಟ್ ವಿಮಾನ ನಿಲ್ದಾಣದ ಟರ್ಮಿನಲ್ ಮೇಲ್ಛಾವಣಿ ಕುಸಿತ!

ಗುಜರಾತ್‌ನ ರಾಜ್‌ಕೋಟ್ ವಿಮಾನ ನಿಲ್ದಾಣದ ಟರ್ಮಿನಲ್ ಹೊರಗಿನ ಮೇಲ್ಛಾವಣಿ ಕುಸಿದಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಪ್ರಯಾಣಿಕರ ಪಿಕಪ್ ಮತ್ತು ಡ್ರಾಪ್ ಪ್ರದೇಶದಲ್ಲಿರುವ ಮೇಲ್ಛಾವಣಿ ಕುಸಿದಿದ್ದು,...

ಕರೋನಾ ಸಮಯದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯೇ ಬಿಬಿಎಂಪಿಯಲ್ಲೂ ಹಗರಣ: ತನಿಖೆ ಆರಂಭಿಸಿದ ಲೋಕಾಯುಕ್ತ!

ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿಗಳಿಗೆ ಬಿಬಿಎಂಪಿಯ ಕಲ್ಯಾಣ ಇಲಾಖೆಯಿಂದ ಅಕ್ರಮವಾಗಿ ಕೋಟಿ ಕೋಟಿ ಹಣವನ್ನು ವರ್ಗಾವಣೆ ಮಾಡಿರುವ ಘಟನೆ ಕರೋನಾ ಸಮಯದಲ್ಲಿ ನಡೆದಿದೆ ಎಂದು ತಡವಾಗಿ ಬೆಳಕಿಗೆ ಬಂದಿದೆ. ಹೌದು, ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿ, ಸಹಕಾರಿ...

2028ರಲ್ಲಿ ನಾನು ಕೂಡ ಸಿಎಂ ಆಗುತ್ತೇನೆ : ಸಚಿವ ಸತೀಶ್ ಜಾರಕಿಹೊಳಿ

2028ರಲ್ಲಿ ನಾನು ಕೂಡ ಮುಖ್ಯಮಂತ್ರಿ ಆಗುತ್ತೇನೆ. ಚುನಾವಣೆ ನೋಡಿಕೊಂಡು ಹಕ್ಕು ಮಂಡಿಸುತ್ತೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ಚಿಕ್ಕೋಡಿಯಲ್ಲಿ ಮಾತನಾಡಿದ ಅವರು,...

ಮಂಡ್ಯದಲ್ಲಿ ಹಳ್ಳಕ್ಕೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್; ಪ್ರಯಾಣಿಕರಿಗೆ ಗಂಭೀರ ಗಾಯ

ಕೆಎಸ್ಆರ್ಟಿಸಿ ಬಸ್ ಹಳ್ಳಕ್ಕೆ ಉರಿಳಿಬಿದ್ದು ಪ್ರಯಾಣಿಕರಿಗೆ ಗಂಭೀರ ಗಾಯವಾಗಿರುವ ಘಟನೆ ಮಂಡ್ಯದ ತೂಬಿನಕೆರೆ ಗ್ರಾಮದ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಈ ಘಟನೆಯಿಂದಾಗಿ 10ಕ್ಕೂ ಹೆಚ್ಚು ಪ್ರಯಾಣಿಕರು...

ಲಡಾಖ್‌ನಲ್ಲಿ ಸೇನಾ ಟ್ಯಾಂಕ್ ಅಪಘಾತ; ಐವರು ಯೋಧರು ನೀರುಪಾಲು

ಕೇಂದ್ರಾಡಳಿತ ಪ್ರದೇಶ ಲಡಾಖ್ನ ಎಲ್‌ಎಸಿ ಬಳಿ ಶನಿವಾರ ಸೇನಾ ಟ್ಯಾಂಕ್ ನಲ್ಲಿ ತೆರಳುತ್ತಿದ್ದ ಐವರು ನೀರುಪಾಲಾಗಿರುವ ಘಟನೆ ನಡೆದಿದೆ. ಶನಿವಾರ ಮುಂಜಾನೆ ಲಡಾಖ್‌ನ ನ್ಯೋಮಾ-ಚುಶುಲ್ ಪ್ರದೇಶದ ಎಲ್‌ಎಸಿ ಬಳಿ T-72 ಟ್ಯಾಂಕ್ ನಲ್ಲಿ ನದಿಯೊಂದನ್ನು...

Latest news