CATEGORY

ರಾಜ್ಯ

ಪತ್ನಿ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಸಮಾಧಿ; ಸಾವಿರಾರು ಮಂದಿ ಸಮ್ಮುಖದಲ್ಲಿ ನಡೆದ ಅಂತ್ಯಕ್ರಿಯೆ

ದಾವಣಗೆರೆ: ನಿನ್ನೆ ನಿಧನರಾದ ಹಿರಿಯ ಕಾಂಗ್ರೆಸ್‌ ಮುಖಂಡ, ಶಾಸಕ, ಉದ್ಯಮಿ ಶಾಮನೂರು ಶಿವಶಂಕರಪ್ಪ ಅವರ ಅಂತ್ಯ ಸಂಸ್ಕಾರ ಇಂದು ಸಂಜೆ ನೆರವೇರಿತು. ದಾವಣಗೆರೆಯಲ್ಲಿರುವ ಶಾಮನೂರು ಒಡೆತನದ ಕಲ್ಲೇಶ್ವರ ಮಿಲ್ ಆವರಣದಲ್ಲಿ ಪತ್ನಿ ಪಾರ್ವತಮ್ಮ...

ವಿವಿಧ ಸಂಘಟನೆಗಳ ಬೇಡಿಕೆ ಈಡೇರಿಕೆಗೆ ಸಕಾರಾತ್ಮಕ ಪರಿಶೀಲನೆ: ಬೈರತಿ ಸುರೇಶ್

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಬಳಿ ಪ್ರತಿಭಟನೆ ನಡೆಸುತ್ತಿರುವ ವಿವಿಧ ಸಂಘಟನೆಗಳ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸುವುದಾಗಿ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಅವರು ಭರವಸೆ ನೀಡಿದ್ದಾರೆ. ಸೋಮವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ...

ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಸಾಧನೆಗೆ ಗೌರವ: ಕರ್ನಾಟಕಕ್ಕೆ 2025ರ ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ

ಬೆಂಗಳೂರು: ಪ್ರತಿಷ್ಠಿತ 'ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ 2025'ಕ್ಕೆ ಕರ್ನಾಟಕ ಪಾತ್ರವಾಗಿದೆ. ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ ದೆಹಲಿಯ ವಿಜ್ಞಾನ ಭವನದಲ್ಲಿ ಡಿಸೆಂಬರ್‌ 14ರಂದು ಆಯೋಜಿಸಿದ್ದ...

ಕೋಳಿ ಮೊಟ್ಟೆಯಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ; ಪರೀಕ್ಷೆಗೆ ನಿರ್ಧರಿಸಿದ ಆರೋಗ್ಯ ಇಲಾಖೆ

ಬೆಂಗಳೂರು: ಬೆಂಗಳೂರಿನಲ್ಲಿ ಮಾರಾಟವಾಗುತ್ತಿರುವ ಕೋಳಿ ಮೊಟ್ಟೆಗಳಲ್ಲಿ ನೈಟ್ರೋಫ್ಯೂರಾನ್‌ ಎಂಬ ಕ್ಯಾನ್ಸರ್‌ ಕಾರಕ ಅಂಶ ಕಂಡು ಬಂದಿದ್ದು, ಗ್ರಾಹಕರಲ್ಲಿ ಆತಂಕಕ್ಕೆ ಕಾರಣವಾಗಿದೆ. 6 ತಿಂಗಳ ಹಿಂದೆ ಪರೀಕ್ಷೆ ನಡೆಸಿದಾಗ ಸುರಕ್ಷಿತ ಎಂಬ ವರದಿ ಬಂದಿತ್ತು....

ಪ್ರಜಾಪ್ರಭುತ್ವ ಉಳಿಸಲು ಮತ ಕಳ್ಳತನ ವಿರುದ್ಧ ಹೋರಾಟ ಮುಂದುವರೆಯಲಿದೆ: ಡಿಸಿಎಂ ಡಿಕೆ ಶಿವಕುಮಾರ್‌

ನವದೆಹಲಿ: ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಲು, ಮತ ಕಳ್ಳತನ ವಿರುದ್ಧ ಕಾಂಗ್ರೆಸ್ ಆರಂಭಿಸಿರುವ ಹೋರಾಟ ಮುಂದುವರಿಯಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ...

ನಾಳೆ ಬೆಳ್ತಂಗಡಿಯಲ್ಲಿ ಬೃಹತ್‌ ಮಹಿಳಾ ನ್ಯಾಯ ಸಮಾವೇಶ; ಧರ್ಮಸ್ಥಳದಲ್ಲಿ ಕಾಣೆಯಾದ ಎಲ್ಲ ಹೆಣ್ಣು ಮಕ್ಕಳನ್ನು ಕುರಿತು ತನಿಖೆ ನಡೆಸುವಂತೆ ಆಗ್ರಹ

ಮಂಗಳೂರು: ಡಿಸೆಂಬರ್‌ 16, ನಾಳೆ ಬೆಳ್ತಂಗಡಿಯಲ್ಲಿ “ಕೊಂದವರು ಯಾರು”ಸಂಘಟನೆಯಆಶ್ರಯದಲ್ಲಿ  ‘ಮಹಿಳಾ ಜಾಥಾ ಮತ್ತು ಮಹಿಳಾ ನ್ಯಾಯ ಸಮಾವೇಶʼ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದ ಅಂಗವಾಗಿ ಮೆರವಣಿಗೆ ಮತ್ತು ಬೆಳ್ತಂಗಡಿ ತಾಲೂಕು ಮೈದಾನದಲ್ಲಿ ಬೃಹತ್‌ ಸಮಾವೇಶ...

ಬಳ್ಳಾರಿ: ಹೊತ್ತಿ ಉರಿದ ಲಾರಿ; ಸುಟ್ಟು ಕರಕಲಾದ 40 ಹೊಸ ಯಮಹಾ  ಬೈಕ್‌ ಗಳು

ಬಳ್ಳಾರಿ: ಯಮಹಾ ಕಂಪನಿಯ ಬೈಕ್‌ಗಳನ್ನು ಸಾಗಿಸುತ್ತಿದ್ದ  ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಬೈಕ್‌ ಗಳು ಸುಟ್ಟು ಕರಲಾದ ಘಟನೆ ಬಳ್ಳಾರಿ ನಗರದಲ್ಲಿ ನಡೆದಿದೆ. ಈ ಅಗ್ನಿ ದುರಂತದಲ್ಲಿ ಸುಮಾರು 40 ಬೈಕ್‌ ಗಳು ಸುಟ್ಟು...

ವಿಧಾನಸಭೆಯಲ್ಲಿ ಶಾಮನೂರು ಅವರಿಗೆ ಸಂತಾಪ: ದಾವಣಗೆರೆ ಯನ್ನು ವಿದ್ಯಾಕಾಶಿ ಮಾಡಿದ ಹೆಗ್ಗಳಿಕೆಯ ರೂವಾರಿ ಎಂದು ಬಣ್ಣಿಸಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ದಾವಣಗೆರೆ ಜಿಲ್ಲೆ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ ಶಾಮನೂರು ಶಿವಶಂಕರಪ್ಪ ಅವರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ...

ಫಸಲು ಬಿಮಾ: ಬಿಜೆಪಿ ಪ್ರಾಯೋಜಿತ ಗೋಲ್‌ ಮಾಲ್ ಯೋಜನೆ: ಖೂಬಾ ಆರೋಪಕ್ಕೆ ಈಶ್ವರ ಖಂಡ್ರೆ ತಿರುಗೇಟು

ಬೆಂಗಳೂರು: ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ರೈತರು, ಕೇಂದ್ರ ಸ ರ್ಕಾರ ಮತ್ತು ರಾಜ್ಯ ಸರ್ಕಾರ ಪಾವತಿಸಿರುವ ಕಂತಿನ ಹಣ ಎಷ್ಟು? ಮತ್ತು ಈವರೆಗೆ ರೈತರಿಗೆ ನೀಡಿರುವ ಪರಿಹಾರ ಎಷ್ಟು ಎಂಬ...

ಇಂದು ಸಂಜೆ ಹಿರಿಯ ಕಾಂಗ್ರೆಸ್‌ ಮುಖಂಡ, ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ; ಸಿಎಂ, ಡಿಸಿಎಂ ಸೇರಿದಂತೆ ಗಣ್ಯರ ಉಪಸ್ಥಿತಿ

ದಾವಣಗೆರೆ: ನಿನ್ನೆ ಭಾನುವಾರ ನಿಧನ ಹೊಂದಿದ  ಹಿರಿಯ ಕಾಂಗ್ರಸ್‌ ಮುಖಂಡ, ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ಇಂದು ಸಂಜೆ 5.30ರ ವೇಳೆಗೆ ನಡೆಯಲಿದೆ. ಅವರ ಒಡೆತನದ ಕಲ್ಲೇಶ್ವರ ರೈಸ್‌ ಮಿಲ್‌ ಆವರಣದಲಿ  ವೀರಶೈವ...

Latest news