ಕಾವೇರಿ ಆರತಿಗೆ ಅಡ್ಡಿಪಡಿಸಬೇಡಿ: ಡಿಸಿಎಂ ಶಿವಕುಮಾರ್‌ ಮನವಿ

Most read

ಕೆಆರ್‌ ಎಸ್:ಕಾವೇರಿ ಜಲಾನಯನ ಪ್ರದೇಶಕ್ಕೆರೂ. 2 ಸಾವಿರ ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದ್ದು, ಪ್ರತಿ ಕ್ಷೇತ್ರವನ್ನೂ ಗಮದಲ್ಲಿಟ್ಟುಕೊಂಡು ಕೆಲಸ‌ ಮಾಡಲಾಗುತ್ತಿದೆ. ಮಂಡ್ಯ ಜಿಲ್ಲೆಯೊಂದಕ್ಕೆ 1 ಸಾವಿರ ಕೋಟಿಗೂ ಹೆಚ್ಚು ಅನುದಾನಕ್ಕೆ ಅನುಮೋದನೆ ನೀಡಲಾಗಿದೆ ಎಂದುಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

92 ವರ್ಷಗಳ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಜೂನ್ ತಿಂಗಳಿನಲ್ಲಿ ಭರ್ತಿಯಾಗಿರುವ ಕೆಆರ್ ಎಸ್ ಅಣೆಕಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಬಾಗಿನ ಅರ್ಪಿಸಿ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಮ್ಮ ಸರ್ಕಾರ ಎರಡು ವರ್ಷಗಳ ಅಧಿಕಾರವಧಿಯಲ್ಲಿ ಕಾವೇರಿ ಅಚ್ಚುಕಟ್ಟು ಪ್ರದೇಶವನ್ನು ಅತಿಹೆಚ್ಚು ಅಭಿವೃದ್ಧಿ ಮಾಡಿದೆ. 80 ವರ್ಷಗಳ ಹಳೆಯ ಕಾಲುವೆಗಳನ್ನು ದುರಸ್ತಿಗೊಳಿಸಲಾಗಿದೆ. ತಮಿಳುನಾಡಿಗೆ 9 ಟಿಎಂಸಿ ನೀರು ಹೋಗಬೇಕಿತ್ತು ಹೆಚ್ಚು ಮಳೆ ಬಂದ ಕಾರಣಕ್ಕೆ 30 ಟಿಎಂಸಿಗಿಂತ ಹೆಚ್ಚು ನೀರು ಬಿಡಲಾಗಿದೆ. ಕಳೆದ ವರ್ಷವೂ 177 ಟಿಎಂಸಿಗಿಂತ ಹೆಚ್ಚುವರಿಯಾಗಿ 305 ಟಿಎಂಸಿ ನೀರು ಹರಿಸಲಾಗಿತ್ತು. 2022- 23 ರಲ್ಲಿ 400 ಟಿಎಂಸಿ ಹೆಚ್ಚುವರಿ ನೀರು ಹರಿಸಲಾಗಿದೆ.‌ ಮೂರು ವರ್ಷಗಳಿಗೊಮ್ಮೆ ನೀರು ಹರಿವಿನ ಪ್ರಮಾಣ ಕಡಿಮೆಯಾಗುವುದನ್ನು ಅಂಕಿಅಂಶಗಳನ್ನು ನೋಡಿದರೆ ತಿಳಿಯುತ್ತದೆ ಎಂದರು.

ಕಾವೇರಿ ಆರತಿಗೆ ಸಹಕರಿಸಲು ಮನವಿ:

ಕಾವೇರಿ ಆರತಿಗೆ ಅಡ್ಡಿಪಡಿಸಬೇಡಿ. ವಿರೋಧ ಮಾಡಲೇಬೇಕು ಎಂಬ ಕಾರಣಕ್ಕೆ ವಿರೋಧಿಸಬೇಡಿ. ಸಹಕಾರ ‌ನೀಡಿ ಎಂದು ವಿನಮ್ರತೆಯಿಂದ ಕೇಳಿಕೊಳ್ಳುತ್ತೇನೆ ಎಂದರು. ನೀರಿಗೆ ಜಾತಿ, ಧರ್ಮವಿಲ್ಲ. ನೀರನ್ನು ಪೂಜೆ ಮಾಡುವುದು ನಮ್ಮ ಸಂಸ್ಕೃತಿ. ಪ್ರಯತ್ನಕ್ಕೆ ಸೋಲಾಗಬಹುದು, ಪ್ರಾರ್ಥನೆಗೆ ಸೋಲಾಗುವುದಿಲ್ಲ. ಈ ರಾಜ್ಯದ ರೈತರ ಅಭಿವೃದ್ಧಿಗೆ ನಮ್ಮ ಸರ್ಕಾರ ಅನೇಕ ಅನುದಾನ ನೀಡುತ್ತಿದೆ. 19,700 ಕೋಟಿ ಹಣವನ್ನು ರೈತರಿಗೆ ನೀಡುವ ಉಚಿತ ವಿದ್ಯುಚ್ಛಕ್ತಿಗಾಗಿ ನಮ್ಮ ಸರ್ಕಾರ ನೀಡುತ್ತಿದೆ ಎಂದು ವಿವರಿಸಿದರು.

ಅಣೆಕಟ್ಟಿನಿಂದ ಅರ್ಧ ಕಿಲೋಮೀಟರ್ ದೂರದಲ್ಲಿ ಕಾವೇರಿ ಆರತಿ ನಡೆಸಲು ಸ್ಥಳ ನಿಗದಿಪಡಿಸಲಾಗಿದೆ.  ದೇವರಿಗೆ ಪ್ರಾರ್ಥನೆ ಮಾಡಲು ಅರ್ಜಿ ಹಾಕಬೇಕೆ? ಯಾರದ್ದಾದರೂ ಅನುಮತಿ ಏಕೆ ಬೇಕು? ಬೆಂಗಳೂರಿನಲ್ಲಿ ನಡೆಸಿದ ಕಾವೇರಿ ಆರತಿಗೆ 25 ಸಾವಿರ ಜನ ಸೇರಿದ್ದರು. ಇಲ್ಲಿ ಕಾವೇರಿ ಆರತಿ ನಡೆಸಿದರೆ ಮಂಡ್ಯ, ಮೈಸೂರು ಭಾಗದ 1,500 ಜನರಿಗೆ ಉದ್ಯೋಗ ದೊರಕುತ್ತದೆ. ಬೃಂದಾವನ ಉದ್ಯಾನ ಅಭಿವೃದ್ಧಿ ಮಾಡಿದರೆ ಸ್ಥಳಿಯ 3 ಸಾವಿರ ಜನರಿಗೆ ಉದ್ಯೋಗ ದೊರೆಯುತ್ತದೆ ಎಂದು ಶಿವಕುಮಾರ್‌ ಹೇಳಿದರು.

More articles

Latest article