Thursday, December 12, 2024

ದಿ: 14 ರಂದು ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

Most read

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ವೃಷಭಾವತಿ 220 ಕೆವಿ ವಿದ್ಯುತ್ ಸ್ಥಾವರದಿಂದ ತಾತಗುಣಿ ವಿದ್ಯುತ್ ಸ್ಥಾವರಕ್ಕೆ ಹರಿಯುತ್ತಿರುವ 220 ಕೆವಿ ವಿದ್ಯುತ್ ಮಾರ್ಗದಲ್ಲಿರುವ 220 ಕೆವಿ High Level Bus GOS ಮತ್ತು ಇತರೆ ಪರಿಕರಗಳನ್ನು ತುರ್ತಾಗಿ ಬದಲಾಯಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ದುರಸ್ಥಿ ಕಾಮಗಾರಿಗಳನ್ನು ಕೈಗೊಳ್ಳಲು ತಾತಗುಣಿ 220 ಕೆವಿ ವಿದ್ಯುತ್ ಸ್ಥಾವರವನ್ನು ಹಾಗೂ ಕಾವೇರಿ ನೀರು ಸರಬರಾಜು ಯೋಜನೆಯ ಎಲ್ಲಾ ಹಂತಗಳ ಜಲರೇಚಕ ಯಂತ್ರಗಾರಗಳನ್ನು ದಿನಾಂಕ 14-11-2024 ರಂದು ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಅಂದರೆ ಒಟ್ಟು 2 ಗಂಟೆಗಳ ಕಾಲ ಸ್ಥಗಿತಗೊಳಿಸುತ್ತಿರುವ ಹಿನ್ನಲೆಯಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸಲು ಹಾಗೂ ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಕೋರಲಾಗಿದೆ.

More articles

Latest article