ನೀಟ್-ಯುಜಿ ಪರೀಕ್ಷೆ ಅಕ್ರಮ ಪ್ರಕರಣ: ಇಬ್ಬರನ್ನು ಬಂಧಿಸಿದ ಸಿಬಿಐ

Most read

ನೀಟ್-ಯುಜಿ ಪೇಪರ್ ಸೋರಿಕೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಬಿಹಾರದ ಪಾಟ್ನಾದಲ್ಲಿ ಮೊದಲ ಬಂಧನ ಮಾಡಿದೆ. ತನಿಖಾ ಸಂಸ್ಥೆ ಇಬ್ಬರನ್ನು ವಶಕ್ಕೆ ತೆಗೆದುಕೊಂಡಿದೆ. ಬಂಧಿತರನ್ನು ಮನೀಶ್ ಕುಮಾರ್ ಮತ್ತು ಅಶುತೋಷ್ ಕುಮಾರ್ ಎಂದು ಗುರುತಿಸಲಾಗಿದ್ದು, ಇಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಮೂಲಗಳ ಪ್ರಕಾರ, ಅಶುತೋಷ್ NEET ಪೇಪರ್‌ಗಳನ್ನು ಹಂಚಿದ್ದಾನೆ, ಮನೀಶ್ ಸೋರಿಕೆಯಾದ ಪ್ರಶ್ನೆ ಪತ್ರಿಕೆಗಳಿಗಾಗಿ ಲಕ್ಷ ಲಕ್ಷ ಹಣವನ್ನು ಪೋಷಕರು ಮತ್ತು ವಿದ್ಯಾರ್ಥಿಗಳಿಂದ ತೆಗೆದುಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ತನಿಖಾ ಸಂಸ್ಥೆಯು NEET-UF ಪರೀಕ್ಷೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸೋಮವಾರ ಐದು ಪ್ರಕರಣಗಳನ್ನು ದಾಖಲಿಸಿದೆ. ಏತನ್ಮಧ್ಯೆ, ಶಿಕ್ಷಣ ಸಚಿವಾಲಯ ನೀಡಿದ ದೂರಿನ ಮೇರೆಗೆ ಸಿಬಿಐ ಒಂದು ಪ್ರಕರಣವನ್ನು ದಾಖಲಿಸಿದೆ. ಒಟ್ಟಾರೆ ತನಿಖಾ ಸಂಸ್ಥೆ ಆರು ಪ್ರಕರಣಗಳ ತನಿಖೆ ನಡೆಸುತ್ತಿದೆ.

ಆರು ಪ್ರಕರಣಗಳಲ್ಲಿ ತಲಾ ಒಂದನ್ನು ಬಿಹಾರ ಮತ್ತು ಗುಜರಾತ್ ಸರ್ಕಾರಗಳು ದಾಖಲಿಸಿವೆ. ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ರಾಜಸ್ಥಾನ ಸರ್ಕಾರ ಮೂರು ಪ್ರಕರಣಗಳನ್ನು ದಾಖಲಿಸಿದೆ.

ಬಿಹಾರವನ್ನು ಹೊರತುಪಡಿಸಿ, ಇತರ ರಾಜ್ಯಗಳಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ಪ್ರಾಕ್ಸಿ ಅಭ್ಯರ್ಥಿಗಳು ಇದ್ದಾರೆ ಇವರ ಜೊತೆ ಇನ್ವಿಜಿಲೇಟರ್‌ಗಳು ಒಳಗೊಂಡಿದ್ದಾರೆ ಎನ್ನಲಾಗಿದೆ. ಮೇ 5ರಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ NEET -UG ಪರೀಕ್ಷೆ ನಡೆಸಿತ್ತು. ಇದಾದ ಬಳಿಕ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿರುವುದು ಬೆಳಕಿಗೆ ಬಂದಿದೆ. ಇದೀಗ ಪಾರದರ್ಶಕ ತನಿಖೆಗಾಗಿ ಕೇಂದ್ರ ಶಿಕ್ಷಣ ಸಚಿವಾಲಯ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿತ್ತು.

More articles

Latest article