ಲೇಖಕ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತ ಹರ್ಷ್ ಮಂದರ್ ಸ್ಥಾಪಿಸಿದ ಎನ್‌ಜಿಒ ವಿದೇಶಿ ನಿಧಿ (ನಿಯಂತ್ರಣ) ಕಾಯ್ದೆಯ ಉಲ್ಲಂಘಿಸಿದೆ ಎಂದು ಆರೋಪಿಸಿ ಸಿಬಿಐ ಶುಕ್ರವಾರ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿ ಶೋಧ ನಡೆಸಿದೆ.
ಮಂದರ್ ಅವರ ನಿವಾಸ ಮತ್ತು ಅಧಿಕೃತ ಸ್ಥಳಗಳ ಮೇಲೂ ದಾಳಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಜಿಒ ಅಮನ್ ಬಿರಾದಾರಿ ವಿರುದ್ಧವೂ ಸಿಬಿಐ ಪ್ರಕರಣ ದಾಖಲಿಸಿದೆ.
ಎನ್‌ಜಿಒ ಸಂಸ್ಥಾಪಕರಾದ ಮಂದರ್ ಅವರು ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ಸೋನಿಯಾ ಗಾಂಧಿ ನೇತೃತ್ವದ ರಾಷ್ಟ್ರೀಯ ಸಲಹಾ ಮಂಡಳಿಯ ಮಾಜಿ ಸದಸ್ಯರಾಗಿದ್ದರು.
ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಕೇಂದ್ರ ಗೃಹ ಸಚಿವಾಲಯದ ದೂರಿನ ಮೇರೆಗೆ ಎನ್‌ಜಿಒ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.