2026ರಿಂದ 10ನೇ ತರಗತಿಗೆ ಎರಡು ಪರೀಕ್ಷೆಗಳು: ಸಿ ಬಿ ಎಸ್‌ ಇ ಪ್ರಕಟಣೆ

ನವದೆಹಲಿ: ಸಿ ಬಿ ಎಸ್‌ ಇ ಪಠ್ಯದಲ್ಲಿ ಓದುವ ವಿದ್ಯಾರ್ಥಿಗಳಿಗೆ ಶುಭ ಸುದ್ದಿ ಹೊರಬಿದ್ದಿದೆ. 2026ನೇ ಸಾಲಿನಿಂದ 10ನೇ ತರಗತಿಯ ವಿದ್ಯಾರ್ಥಿಗಳು ಒಂದು ಶೈಕ್ಷಣಿಕ ಅವಧಿಯಲ್ಲಿ ಎರಡು ಬಾರಿ ಸಿ ಬಿ ಎಸ್‌ ಇ ಬೋರ್ಡ್ ಪರೀಕ್ಷೆಗಳನ್ನು ಬರೆಯಬಹುದಾಗಿದೆ. ಫೆಬ್ರವರಿಯಲ್ಲಿ ಮೊದಲ ಹಂತ ಮತ್ತು ಮೇ ತಿಂಗಳಲ್ಲಿ ಎರಡನೇ ಹಂತದ ಪರೀಕ್ಷೆ ನಡೆಯಲಿದೆ. ಎರಡು ಹಂತಗಳ ಫಲಿತಾಂಶ ಕ್ರಮವಾಗಿ ಏಪ್ರಿಲ್ ಮತ್ತು ಜೂನ್‌ನಲ್ಲಿ ಪ್ರಕಟಿಸಲಾಗುತ್ತದೆ.

ಫೆಬ್ರವರಿಯಲ್ಲಿ ನಡೆಯುವ ಮೊದಲ ಹಂತದ ಪರೀಕ್ಷೆಗೆ ಹಾಜರಾಗುವುದು ಕಡ್ಡಾಯವಾಗಿರುತ್ತದೆ. ಆದರೆ ಮೇ ತಿಂಗಳಲ್ಲಿ ನಿಗದಿಪಡಿಸಲಾದ ಎರಡನೇ ಹಂತದ ಪರೀಕ್ಷೆಯು ತಮ್ಮ ಕಾರ್ಯಕ್ಷಮತೆಯನ್ನು ಸುಧಾರಿಸಲು ಬಯಸುವ ವಿದ್ಯಾರ್ಥಿಗಳಿಗೆ ಐಚ್ಛಿಕವಾಗಿರುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(ಸಿ ಬಿ ಎಸ್‌ ಇ) 10ನೇ ತರಗತಿಗೆ ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮಾನದಂಡಗಳನ್ನು ಶಿಫಾರಸು ಮಾಡಿದೆ. ಮೊದಲ ಹಂತಕ್ಕೆ(ವಿದ್ಯಾರ್ಥಿಗಳು) ಹಾಜರಾಗುವುದು ಕಡ್ಡಾಯವಾಗಿರುತ್ತದೆ ಮತ್ತು ಎರಡನೇ ಹಂತವು ಐಚ್ಛಿಕವಾಗಿರುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ವಿಜ್ಞಾನ, ಗಣಿತ, ಸಮಾಜ ವಿಜ್ಞಾನ ಮತ್ತು ಭಾಷಾ ವಿಷಯ ಹೊರತುಪಡಿಸಿ ಇತರೆ ಯಾವುದೇ ಮೂರು ವಿಷಯಗಳಲ್ಲಿ ವಿದ್ಯಾರ್ಥಿಗಳು ತಮ್ಮ ಕಾರ್ಯಕ್ಷಮತೆಯನ್ನು ಸುಧಾರಿಸಿಕೊಳ್ಳಲು ಅವಕಾಶ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

More articles

Latest article

Most read