ಸಿಸಿಬಿ ಪೊಲೀಸರ ಕಾರ್ಯಾಚರಣೆ; 5 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ

Most read

ಬೆಂಗಳೂರುಸಿಸಿಬಿ ಮಾದಕವಸ್ತು ನಿಗ್ರಹದಳ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 5 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಹಿಂದೆ ಈಗಲ್ ಟನ್ ರೆಸಾರ್ಟ್‌ನಲ್ಲಿ ಬಂಧನಕ್ಕೊಳಗಾಗಿದ್ದ ಪೆಡ್ಲರ್‌ ಮತ್ತೆ ಸಿಕ್ಕಿಹಾಕಿಕೊಂಡಿದ್ದು ಆತನಿಂದ 3.5 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಹಾಗೂ 30 ಲಕ್ಷ ರೂ. ನಗದನ್ನು ಸಿಸಿಬಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಮತ್ತೊಂದು ಪ್ರಕರಣದಲ್ಲಿ 1.5 ಕೋಟಿ ರೂ. ಮೌಲ್ಯದ ಸುಮಾರು 1 ಕೆಜಿ ಎಂಡಿಎಂಎ ಡ್ರಗ್ ವಶಪಡಿಸಿಕೊಳ್ಳಲಾಗಿದೆ. ಈ ಮಾದಕ ವಸ್ತುಗಳನ್ನು ವಿವಿಧ ಕಾಲೇಜು ವಿದ್ಯಾರ್ಥಿಗಳು ಮತ್ತು ಐಟಿಬಿಟಿ ಕಂಪನಿ ಉದ್ಯೋಗಿಗಳಿಗೆ ಮಾರಾಟ ಮಾಡಲು ಸಂಚು ರೂಪಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.  ಈ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಇಬ್ಬರನ್ನು ಬಂಧಿಸಲಾಗಿದೆ.

More articles

Latest article