ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಐಶಾರಾಮಿ ವ್ಯವಸ್ಥೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಜೈಲರ್ಗಳಾದ ಶೆಹನಾಜ್ ಹಾಗೂ ಪಾಂಡುರಂಗ ಇಬ್ಬರನ್ನು ಅಮಾನತುಗೊಳಿಸಿ ಕಾರಾಗೃಹ ಇಲಾಖೆಯ ಡಿಜಿ ಆದೇಶ ಹೊರಡಿಸಿದ್ದಾರೆ.
ಕೇಂದ್ರ ಕಾರಾಗೃಹದಲ್ಲಿ ಕೈದಿಗಳನ್ನು ಕಾನೂನು ಮೀತಿಗಿನ್ನ ಉತ್ತಮ ವ್ಯವಸ್ಥೆ ನೀಡಿ ನೋಡಿಕೊಳ್ಳಲಾಗುತ್ತಿದೆ ಎಂದು ಆರೋಪ ಕೇಳಿಬಂದ ಬೆನ್ನಲ್ಲೇ ಸಿಸಿಬಿ ವಿಭಾಗದ ಎಸಿಪಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿತ್ತು. ಬಳಿಕ ಜೈಲಿನ ಮೇಲೆ ಪೊಲೀಸ್ ಆಯುಕ್ತರು ದಾಳಿ ಮಾಡಿದ್ದರು. ಈ ವೇಳೆ ಎರಡು ಮೊಬೈಲ್ ಸೇರಿದಂತೆ ಸಿಗರೇಟ್, ಗುಟ್ಕಾ ಪ್ಯಾಕೆಟ್ ಪತ್ತೆಯಾಗಿತ್ತು. ಹೀಗಾಗಿ ಇಬ್ಬರು ಜೈಲರ್ಗಳನ್ನ ಅಮಾನತುಗೊಳಿಸಲಾಗಿದೆ.
ಶನಿವಾರವೂ ಜೈಲಿನಲ್ಲಿ ಶೋಧಕಾರ್ಯ ಮುಂದುವರಿಸಿದ್ದಾರೆ. ಕಾರಾಗೃಹ ಇಲಾಖೆ ಡಿಜಿ ಕಚೇರಿಯ ಎಸ್ಪಿ ಯಶೋಧಾ ನೇತೃತ್ವದಲ್ಲಿ ಶೋಧ ನಡೆಯುತ್ತಿದೆ.