ಇಂದು, ನಾಳೆ ಸಿಇಟಿ ಪರೀಕ್ಷೆ; 775 ಕೇಂದ್ರ, 3.31 ಲಕ್ಷ ಅಭ್ಯರ್ಥಿಗಳು; ಅನುತ್ತೀರ್ಣರಾದವರಿಗೂ ಪರೀಕ್ಷೆಗೆ ಅವಕಾಶ

Most read

ಬೆಂಗಳೂರು: ಎಂಜಿನಿಯರಿಂಗ್, ಮೆಡಿಕಲ್ ಸೇರಿ ವಿವಿಧ ವೃತ್ತಿಪರ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ನಡೆಯುವ ಕರ್ನಾಟಕ ಸಿಇಟಿ- 2025 ಪರೀಕ್ಷೆ ಇಂದು ಮತ್ತು ನಾಳೆ, ಏಪ್ರಿಲ್ 17 ನಡೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸಿಇಟಿ ಪರೀಕ್ಷೆ ನಡೆಸುತ್ತಿದ್ದು,  ಬೆಂಗಳೂರು ಸೇರಿ ರಾಜ್ಯದ 775 ಕೇಂದ್ರಗಳಲ್ಲಿ ಸಿಇಟಿ ನಡೆಯುತ್ತಿದೆ. ಸಿಇಟಿಗೆ ಪೂರ್ವಭಾವಿಯಾಗಿ ಏಪ್ರಿಲ್ 15 ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ಕನ್ನಡ ಭಾಷಾ ಪರೀಕ್ಷೆಯು ಬೆಂಗಳೂರು, ಮಂಗಳೂರು, ವಿಜಯಪುರ ಮತ್ತು ಬೆಳಗಾವಿ ನಗರಗಳ ಒಟ್ಟು ಐದು ಕೇಂದ್ರಗಳಲ್ಲಿ ನಡೆದಿದೆ. ಏ.16 ರಂದು ಭೌತ ವಿಜ್ಞಾನ ಮತ್ತು ರಸಾಯನ ವಿಜ್ಞಾನ ಹಾಗೂ ಏ.17ರಂದು ಗಣಿತ ಮತ್ತು ಜೀವ ವಿಜ್ಞಾನ ವಿಷಯಗಳ ಪರೀಕ್ಷೆಗಳು ನಡೆಯಲಿವೆ.

ಈ ಬಾರಿ ವೆಬ್‌ಕಾಸ್ಟಿಂಗ್ ನಿಗಾದಲ್ಲಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ಪರೀಕ್ಷೆಗೂ ಸಿಸಿ ಕ್ಯಾಮೆರಾ ಕಣ್ಣಾವಲು ಇರುತ್ತದೆ. ವೆಬ್‌ಕಾಸ್ಟಿಂಗ್ ಮೂಲಕ ಎಲ್ಲ ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ ಇಡಲಾಗಿದೆ. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಮೇಲುಸ್ತುವಾರಿ ನಡೆಸಲಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ದ್ವಿತೀಯ ಪಿಯುಸಿ ಮೊದಲ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿರುವ ಅಥವಾ ಅನುತ್ತೀರ್ಣರಾಗಿರುವವರಿಗೆ ಇನ್ನೂ ಎರಡು ಪರೀಕ್ಷೆಗಳ ಅವಕಾಶ ಇರುವುದರಿಂದ ಎಲ್ಲರಿಗೂ ಸಿಇಟಿ ಬರೆಯಲು ಅವಕಾಶ ಇದೆ.

More articles

Latest article