ಸಿಇಟಿ ಫಲಿತಾಂಶ ಪ್ರಕಟ; ಇಂಜಿನಿಯರಿಂಗ್ ವಿಭಾಗದಲ್ಲಿ ಭವೇಶ್ ಜಯಂತಿ ಪ್ರಥಮ ಸ್ಥಾನ

Most read

ಬೆಂಗಳೂರು: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)- 2025 ರ ಫಲಿತಾಂಶ ಪ್ರಕಟವಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಸಿಇಟಿ ಪರೀಕ್ಷೆಗೆ 3.30 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು, 3,11,000 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಸಚಿವರು ಹೇಳಿದರು.

ಸಿಇಟಿ ಎಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಮಾರತಹಳ್ಳಿ ಚೈತ್ಯನ್ಯ ಸಿಬಿಎಸ್ ಇ ಶಾಲೆಯ ಭವೇಶ್ ಜಯಂತಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಇವರು ಶೇ 99.06 ರಷ್ಟು ಅಂಕ ಗಳಿಸಿದ್ದಾರೆ. ಚೈತನ್ಯ ಟೆಕ್ನೋ ಸ್ಕೂಲ್, ಕನಕಪುರ ರಸ್ತೆ ಉತ್ತರಹಳ್ಳಿ ಇದರ ವಿದ್ಯಾರ್ಥಿ ಸಾತ್ವಿಕ್ ಬಿರಾದರ್ (99.33%) ಎರಡನೇ ಸ್ಥಾನ ಮತ್ತು ದಿನೇಶ್ ಗೋಮತಿ ಶಂಕರ್ ಅರುಣಾಚಲಂ 3ನೇ ಸ್ಥಾನ (99%) ಗಳಿಸಿದ್ದಾರೆ. ಕೃಷಿ ವಿಭಾಗದಲ್ಲಿ ಅಕ್ಷಯ್ ಎಂ ಪ್ರಥಮ ಸ್ಥಾನ, ಸಾಯಿಶ್ ಶರವಣ ಪಂಡಿತ್ ದ್ವಿತೀಯ ಸ್ಥಾನ ಹಾಗೂ ಸುಚಿತ್.ಪಿ. ಪ್ರಸಾದ್ ಮೂರನೇ ಸ್ಥಾನ ಗಳಿಸಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.

ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಕೆಇಎ ಈ ಪರೀಕ್ಷೆಯನ್ನು ನಡೆಸುತ್ತದೆ. ಏಪ್ರಿಲ್ 16 ಮತ್ತು 17 ರಂದು ಪರೀಕ್ಷೆ ನಡೆದಿತ್ತು. cetonline.karnataka.gov.in ಅಥವಾ kea.kar.nic.in ನಲ್ಲಿ ಮಧ್ಯಾಹ್ನ 2 ಗಂಟೆಯ ನಂತರ ಫಲಿತಾಂಶವನ್ನು ನೋಡಬಹುದಾಗಿದೆ.

More articles

Latest article