ಒಂಟಿ ಮಹಿಳೆಯರ ಚಿನ್ನದ ಸರ ದೋಚುತ್ತಿದ್ದ ಇಬ್ಬರ ಬಂಧನ

Most read

ಬೆಂಗಳೂರು: ಒಂಟಿ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮಾಂಗಲ್ಯ ಮತ್ತು ಚಿನ್ನದ ಸರಗಳನ್ನು  ದೋಚುತ್ತಿದ್ದ ಇಬ್ಬರು ಆರೋಪಿಗಳನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಡಿ.ಜೆ.ಹಳ್ಳಿ ನಿವಾಸಿಗಳಾದ ಆರೀಫ್ ಖಾನ್ ಮತ್ತು ಮುಷ್ತಾಕೀಬ್ ಪಾಷಾ ಬಂಧಿತ ಆರೋಪಿಗಳು. ಇವರಿಂದ ಸುಮಾರು 3 ಲಕ್ಷ ಮೌಲ್ಯದ 47 ಗ್ರಾಂ ತೂಕದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ. ನ.22 ರಂದು ಅಗ್ರಹಾರ ಬಡಾವಣೆ ಮುಖ್ಯರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿದ್ದ ಆರೋಪಿಗಳು ಸರ ಕಿತ್ತುಕೊಂಡು ಪರಾರಿಯಾಗಿದ್ದರು. ಖಚಿತ  ಮಾಹಿತಿ ಮೇರೆಗೆ ಸಾರಾಯಿಪಾಳ್ಯದಲ್ಲಿ ಇವರನ್ನು ಬಂಧಿಸಲಾಗಿದೆ. ಸರ ಕಿತ್ತುಕೊಂಡು ಪರಾರಿಯಾಗಿದ್ದು ತಾವೇ ಎಂದು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಡ್ರಗ್‌ ಗೆ ದಾಸರಾಗಿದ್ದು, ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಸರಗಳ್ಳತನಕ್ಕೆ ಇಳಿದಿದ್ದರು. ಇವರ ಬಂಧನದಿಂದ ಸಂಪಿಗೆಹಳ್ಳಿ ಮತ್ತು ಸಂಜಯ ನಗರ ಠಾಣೆ ವ್ಯಾಪ್ತಿಯಲ್ಲಿ ತಲಾ ಒಂದೊಂದು ಸರಗಳ್ಳತನದ ಪ್ರಕರಣಗಳು ಪತ್ತೆಯಾಗಿವೆ.


More articles

Latest article