ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ : ಹವಮಾನ ಇಲಾಖೆ ಎಚ್ಚರ

ಬೆಂಗಳೂರು :  ಬಂಗಾಳ ಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕಳೆದ ತಿಂಗಳು ಬೆಂಗಳೂರಿನಲ್ಲಿ ಮಳೆ ಹಿಂದೆಂದೂ ಬಾರದಷ್ಟು ಮಳೆಯಾಗಿತ್ತು. ರಾಜ್ಯ ರಾಜಧಾನಿಯ ಜನರು ಕಳೆದ ತಿಂಗಳ ಮಳೆಗೆ ತತ್ತರಿಸಿ ಬಿಟ್ಟಿದ್ದರು. ಇನ್ನು ನೆನ್ನೆ ರಾತ್ರಿಯೂ ಬೆಂಗಳೂರಲ್ಲಿ ಮಳೆ ಬಿದ್ದಿದೆ. ಅಲ್ಲದೇ ಬೆಳಗ್ಗೆಯಿಂದ ವಾತವಾರಣ ಸಂಪೂರ್ಣವಾಗಿ ತುಂತುರುನಿಂದ ತುಂಬಿದ್ದು, ಸಂಜೆ ಅಷ್ಟರಲ್ಲಿ ಮಳೆಯಾಗುವ ಸಂಭವವಿದೆ. ಹೀಗಾಗಿ ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಾಳೆ ಮಳೆಯ ಮುನ್ಸೂಚನೆ ಇದ್ದು, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ನಾಳೆ ಶಿವಮೊಗ್ಗ, ಚಾಮರಾಜನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಿದೆ. ದಕ್ಷಿಣ ಒಳನಾಡು, ಕರಾವಳಿಯ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ. ಆದರೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ತುಂತುರು ಮಳೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

More articles

Latest article

Most read