ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ: ಪವನ್ ಕಲ್ಯಾಣ್ ಉಪಮುಖ್ಯಮಂತ್ರಿ

ಅಮರಾವತಿ: ಆಂಧ್ರಪ್ರದೇಶದ ನೂತನ‌ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು, ಉಪಮುಖ್ಯಮಂತ್ರಿಯಾಗಿ ಪವನ್ ಕಲ್ಯಾಣ್ ಇಂದು ಪ್ರಮಾಣವಚನ ಸ್ವೀಕರಿಸಿದರು.

ಸುದೀರ್ಘ ಅವಧಿಗೆ ಆಂಧ್ರ ಪ್ರದೇಶದ ರಾಜಕಾರಣದಲ್ಲಿರುವ ಚಂದ್ರಬಾಬು ನಾಯ್ಡು ಇಂದು ನಾಲ್ಕನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಈ‌ ಹಿಂದೆ ಅವರು ಮೂರು ಬಾರಿ ಅವಿಭಜಿತ ಆಂಧ್ರಪ್ರದೇಶ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.

175 ಸದಸ್ಯ ಸ್ಥಾನದ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಚಂದ್ರಬಾಬು ನಾಯ್ಡು ಅವರ ನೇತೃತ್ವದ ತೆಲುಗು ದೇಶಂ ಪಕ್ಷ 135 ಸ್ಥಾನಗಳಲ್ಲಿ ಜಯಭೇರಿ ಬಾರಿಸಿತ್ತು. ಅಷ್ಟೇ ಅಲ್ಲದೆ ಚಿತ್ರನಟ ಪವನ್‌ ಕಲ್ಯಾಣ್ ನಾಯಕತ್ವದ ಜನಸೇನಾ ಪಕ್ಷ 21 ಸ್ಥಾನಗಳನ್ನು ಗೆದ್ದು ಬೀಗಿತ್ತು. ಮತ್ತೊಂದು ಮಿತ್ರ ಪಕ್ಷ ಬಿಜೆಪಿ 8 ಸ್ಥಾನಗಳಲ್ಲಿ ಜಯಗಳಿಸಿದರೆ ಆಡಳಿತಾರೂಢ ವೈಎಸ್ ಆರ್ ಕಾಂಗ್ರೆಸ್ ಕೇವಲ 11 ಸ್ಥಾನಗಳಲ್ಲಿ ಮಾತ್ರ ಗೆದ್ದು ಮುಖಭಂಗ ಅನುಭವಿಸಿತ್ತು.

More articles

Latest article

Most read