ಚನ್ನಪಟ್ಟಣ ಉಪಚುನಾವಣೆಯ ಅಭ್ಯರ್ಥಿ ನಾನೇ: ಡಿ.ಕೆ. ಶಿವಕುಮಾರ್

Most read

ಚನ್ನಪಟ್ಟಣದ ಅಭ್ಯರ್ಥಿ ನಾನೇ. ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿಯಾದರು ನನಗೆ ಮತ ಹಾಕಿದಂತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಚನ್ನಪಟ್ಟಣ ಉಪಚುನಾವಣೆ ಸಂಬಂಧ BJP, JDS ಪಕ್ಷಗಳು ಚರ್ಚೆ ನಡೆಸಿರುವ ಬಗ್ಗೆ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಶುಕ್ರವಾರ ಉತ್ತರಿಸಿ, ಬಿ ಫಾರಂ ಬರೆಯುವುದು, ಅದಕ್ಕೆ ಸಹಿ ಹಾಕುವುದು ನಾನು. ನಿಮ್ಮನ್ನು ಅಂದರೆ ಮಾಧ್ಯಮದವರನ್ನು ನಿಲ್ಲಿಸಿದರೂ ನನಗೆ ವೋಟು ಎಂದು ಹೇಳಿದ್ದಾರೆ.

ಎರಡು ವಿರೋಧ ಪಕ್ಷಗಳು ಒಂದಾಗಿವೆ ಎಂದು ಕೇಳಿದಾಗ, ಎಷ್ಟಾದರೂ ಆಗಲಿ ನಮಗೆ ಅದು ಸಂಬಂಧವಿಲ್ಲ. ನಾವು ಜನಸೇವೆ ಮಾಡುತ್ತೇವೆ. ಮಿಕ್ಕಿದ್ದು ಜನರ ತೀರ್ಮಾನಕ್ಕೆ ಬಿಟ್ಟಿದ್ದು ಎಂದಿದ್ದಾರೆ.

ಸಿ.ಪಿ.ಯೋಗೇಶ್ವರ್ ಅವರು ಬಂದರೆ ಪಕ್ಷಕ್ಕೆ ಆಹ್ವಾನ ಮಾಡುವಿರಾ ಎಂದು ಕೇಳಿದಾಗ, ನೀವುಗಳು (ಮಾಧ್ಯಮ) ಏಕೆ ಇದರ ಬಗ್ಗೆ ಮಾತನಾಡುತ್ತೀರಾ? ನಮ್ಮ ಬಳಿಗೆ ಯಾರೂ ಬಂದಿಲ್ಲ, ಚರ್ಚೆಯನ್ನೂ ಮಾಡಿಲ್ಲ. ಅವರು ಮೈತ್ರಿ ಮಾಡಿಕೊಂಡಿರುವಾಗ ಏಕೆ ಅವರ ಬಗ್ಗೆ ಮಾತನಾಡಬೇಕು. ಮೊದಲು ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತೇನೆ ಎಂದರು.

ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ ಎನ್ನುವ ಸಿ.ಪಿ.ಯೋಗೇಶ್ವರ್ ಹೇಳಿಕೆ ಬಗ್ಗೆ ಕೇಳಿದಾಗ, ನನಗೆ ನಿಮ್ಮ (ಮಾಧ್ಯಮ) ಮಾತಿನ ಮೇಲೆ ನಂಬಿಕೆ ಇಲ್ಲ ಎಂದು ಹೇಳಿದರು.

More articles

Latest article