ಪಕ್ಷ ಹೇಳಿದ್ರೆ ನಾನಾಗಲಿ, ಡಿಕೆ ಸುರೇಶ್‌ ಆಗಲಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ : ಡಿಕೆ ಶಿವಕುಮಾರ್

Most read

ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ನಮ್ಮ ಪಕ್ಷ ಹೇಳಿದ್ರೆ ಖಂಡಿತವಾಗಿಯೂ ನಾನಾಗಲಿ, ಡಿಕೆ ಸುರೇಶ್ ಆಗಲಿ ಕೇಳಬೇಕು ಎಂದು ಹೇಳುವ ಮೂಲಕ ಮತ್ತೆ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಉತ್ಸುಕ ತೋರಿದ್ದಾರೆ.

ಈ ಕುರಿತು ಬೆಂಗಳೂರಿನ್ಲಿ ಮಾತನಾಡಿದ ಅವರು, ಡಿಕೆ ಸುರೇಶ್ಗೆ ಲೋಕಸಭಾ ಚುನಾವಣೆಗೂ ಸ್ಪರ್ಧೆ ಮಾಡುವ ಆಸಕ್ತಿ ಇರಲಿಲ್ಲ. ಕಾರ್ಯಕರ್ತರ ಒತ್ತಾಯದ ಮೇರೆಗೆ ಅವರು ಸ್ಪರ್ಧೆ ಮಾಡಿದ್ದರು. ಅವರು ಎಂದಿಗೂ ಅಧಿಕಾರಕ್ಕೆ ಆಸೆ ಪಟ್ಟವರಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದ್ದಾರೆ.

ಚನ್ನಪಟ್ಟಣ ಈಗ ನೆನಪಾಯ್ತ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಮಾತನಾಡಿ, ಚನ್ನಪಟ್ಟಣದಲ್ಲಿ ಅಧಿಕಾರದಲ್ಲಿದ್ದ ದೊಡ್ಡವರು, ಅನುಭವಿ ನಾಯಕರು ಇಲ್ಲಿನ ಜನರ ಸಮಸ್ಯೆ ಬಗೆಹರಿಸುತ್ತಾರೆ ಎಂದು ನಾನು ಭಾವಿಸಿದ್ದೆ. ಆದರೆ ಸಮಸ್ಯೆ ಬಗೆಹರಿದಿಲ್ಲ. ಹೀಗಾಗಿ ನಾನು ಬಂದಿದ್ದೇನೆ. ಕುಮಾರಸ್ವಾಮಿಗೂ ಮುಂಚಿತನಾಗಿ ನಾನು ಚನ್ನಪಟ್ಟಣವನ್ನು ನೋಡಿದವನು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಮತದಾರರ ಸೇರ್ಪಡೆಗೆ ಸೂಚಿಸಿದ್ದೀರಾ ಎಂಬ ಪ್ರಶ್ನೆಗೆ, ಲೋಕಸಭಾ ಚುನಾವಣೆ ಸಮಯದಲ್ಲಿ ಮುಸಲ್ಮಾನ ಸಮುದಾಯದ ಜನರ ಹೆಸರುಗಳನ್ನು ತೆಗೆದು ಹಾಕಲಾಗಿದೆ ಎಂದು ದೂರುಗಳು ಬಂದಿವೆ. ಹೀಗಾಗಿ ಡಿಸಿಗೆ ಮತ್ತೆ ಈ ಮತದಾರರ ಮನೆಗೆ ಭೇಟಿ ನೀಡಿ ಪರಿಶೀಲಿಸಿ ಅವರ ಹೆಸರನ್ನು ಮತ್ತೆ ಸೇರಿಸಲು ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

ಹೊರಗಿ ಜನರನ್ನು ಇಲ್ಲಿಗೆ ತಂದು ಇಲ್ಲಿನ ಮತದಾರರ ಪಟ್ಟಿಯಲ್ಲಿ ಸೇರಿಸಲು ಆಗುವುದಿಲ್ಲ. ಇಲ್ಲಿ ಹೊಸದಾಗಿ ಸೇರಿಸಬೇಕು ಎಂದರೆ ಬಿಟ್ಟಿರುವ ಮತದಾರರನ್ನು ಸೇರಿಸಿ, ಬೇರೆ ಕಡೆ ಇರುವ ಮತದಾರರ ಹೆಸರನ್ನು ಅಳಿಸಬೇಕು. ಹೀಗಾಗಿ ಹೊಸ ತಂತ್ರಜ್ಞಾನದಲ್ಲಿ ಈ ರೀತಿ ಬೇರೆಯವರನ್ನು ತಂದು ಸೇರಿಸಲು ಆಗುವುದಿಲ್ಲ ಎಂದು ತಿಳಿಸಿದ್ದಾರೆ.

More articles

Latest article