Tuesday, December 10, 2024

ಚನ್ನಪಟ್ಟಣ: ಕಾಂಗ್ರೆಸ್ ಸರ್ಕಾರ ಹೆಚ್ಚು ಅನುದಾನ ನೀಡಿದೆ: ರಾಮಲಿಂಗಾರೆಡ್ಡಿ

Most read

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಿ ಪ್ರತಿ ಗ್ರಾಮದ ಅಭಿವೃದ್ಧಿಗೆ ಒತ್ತು ನೀಡಿದೆ ಎಂದು ಸಾರಿಗೆ ಮುಜರಾಯಿ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.


ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಪರವಾಗಿ ಸಚಿವರು ಚಕ್ಕೆರೆ, ಹೊನ್ನಾನಾಯಕನಹಳ್ಳಿ, ಗ್ರಾಮದಲ್ಲಿ ಮತಯಾಚಿಸಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮತನಾಡಿದ ಅವರು ಮನೆ ಇಲ್ಲದವರಿಗೆ ಸುಮಾರು 5000 ಮನೆಗಳನ್ನು ನಿರ್ಮಿಸುವ ಕಾರ್ಯ ಈಗಾಗಲೇ ಪ್ರಾರಂಭವಾಗಿದೆ. ಇದಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೆಚ್ಚಿನ ಶ್ರಮವನ್ನು ವಹಿಸಿದ್ದಾರೆ ಎಂದರು. ಸಿ.ಪಿ.ಯೋಗೇಶ್ವರ್ ಅವರು ಈ ಕ್ಷೇತ್ರದ ಅಭಿವೃದ್ಧಿಗೆ ಕಾಳಜಿ ಹೊಂದಿದ್ದಾರೆ. ಪ್ರತಿ ಗ್ರಾಮದಲ್ಲೂ ಕೆರೆ ನಿರ್ಮಿಸಿ ನೀರನ್ನು ಹರಿಸುವ ಕಾರ್ಯವನ್ನು ಅತ್ಯಂತ ಶ್ರಮಪಟ್ಟು ಜಾರಿಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಯೋಜನೆಗಳು ಜನರಿಗೆ ಅತ್ಯಂತ ಅನುಕೂಲವಾಗಿದೆ ಎಂಬುವ ಮಾತು ಪ್ರತಿಯೊಬ್ಬರ ಬಾಯಲ್ಲೂ ಬರುತ್ತಿದೆ ಎಂದರು.


ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ ಕಾಂಗ್ರೆಸ್ ಸರ್ಕಾರ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸಿದೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಐದು ಯೋಜನೆಗಳನ್ನು ಈಗಾಗಲೇ ಕಾರ್ಯಗತಗೊಳಿಸಿದೆ. ಅದರಲ್ಲೂ ಮಹಿಳೆಯರಿಗೆ ಶಕ್ತಿ ಯೋಜನೆ ಹೆಚ್ಚು ಶಕ್ತಿಯನ್ನ ತುಂಬಿದೆ ಎಂಬುದು ಎಲ್ಲರ ಮನದಾಳದಿಂದ ಬರುತ್ತಿರುವ ಧ್ವನಿಯಾಗಿದೆ, ಕಾಂಗ್ರೆಸ್ ಪಕ್ಷ ಜನರಿಗಾಗಿ ಎಲ್ಲಾ ಅನುಕೂಲವನ್ನು ಮಾಡಿದೆ ಮುಂದಕ್ಕೂ ಸಹ ಮಾಡುತ್ತದೆ ಆದ್ದರಿಂದ ನಿಮ್ಮ ಮತವನ್ನು ಉಪಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್ ಅವರಿಗೆ ನಿಮ್ಮ ಮತವನ್ನು ನೀಡಿ ಆಶೀರ್ವದಿಸಬೇಕೆಂದು ಮತದಾರರಲ್ಲಿ ವಿನಂತಿಸಿಕೊಂಡರು.

More articles

Latest article