ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರ ಗಲಾಟೆ; ಸಂಡೂರಿನಲ್ಲಿ ಬಾಡೂಟಕ್ಕೆ ಬಿರುಸಿನ ಮತದಾನ ಮರೆತ ಮತದಾರ

ಬೆಂಗಳೂರು: ಉಪಚುನಾವಣೆ ನಡೆಯುತ್ತಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮತಗಟ್ಟೆ ಬಳಿ ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ. ಮತಗಟ್ಟೆ ಸಂಖ್ಯೆ 62 ಹಾಗೂ 63ರ ಬಳಿ ಮತಗಟ್ಟೆ ಬಳಿ ಪ್ರಚಾರ ಮಾಡುವ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ.
ಕೈಕೈ ಮಿಲಾಯಿಸುವ ಹಂತ ತಲುಪಿತ್ತು ಎಂದು ಹೇಳಲಾಗಿದೆ. ಇದೇ ಕ್ಷೇತ್ರದಲ್ಲಿ ಪಕ್ಷವೊಂದರ ಮುಖಂಡರು ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಶಿಗ್ಗಾಂವಿ ಕ್ಷೇತ್ರದ ಸವಣೂರಿನ ದಂಡಿನ ಪೇಟೆಯಲ್ಲಿ ಮತದಾರರು ಮತದಾನ ಬಹಿಷ್ಕಾರ ಮಾಡಿದ್ದಾರೆ. 60ಕ್ಕೂ ಹೆಚ್ಚು ಮತದಾರರು ಮತದಾನದಿಂದ ದೂರ ಉಳಿದಿದ್ದಾರೆ. ದಂಡಿನ ಪೇಟೆಯ 7 ಮನೆಗಳ ಸದಸ್ಯರು ಮತದಾನ ಬಹಿಷ್ಕರಿಸಿದ್ದಾರೆ.

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಬೆಂಬಲಿಗರೊಂದಿಗೆ ಆಗಮಿಸಿ ಮತ ಚಲಾಯಿಸಿದ್ದಾರೆ.

ಸಂಡೂರು ಕ್ಷೇತ್ರದ ಸಿದ್ದಾಪುರದಲ್ಲಿ ಇಂದು ಊರ ಹಬ್ಬ ನಡೆಯುತ್ತಿದ್ದು ಬಾಡೂಟದ ಸಿದ್ಧತೆಯಲ್ಲಿ ತೊಡಗಿದ್ದಾರೆ. ಹೀಗಾಗಿ ಮತಗಟ್ಟೆಗಳು ಬಿಕೋ ಎನ್ನುತ್ತಿವೆ. ಶ್ರೀ ಹುದೆವು ತಾಯಮ್ಮ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಪ್ರತಿ 5 ವರ್ಷಕ್ಕೊಮ್ಮೆ ನಡೆಯುವ ಊರ ಜಾತ್ರೆ ಇದಾಗಿದೆ. ಕೇವಲ ಬೆರಳಿಕೆಯಷ್ಟು ಜನ ಮಾತ್ರ ಮತದಾನ ಮಾಡಿದ್ದಾರೆ.

More articles

Latest article

Most read