ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆಗೆ ಶುಲ್ಕ; ಪ್ರಯಾಣಿಕರಿಂದ ಪ್ರತಿಭಟನೆ

ಬೆಂಗಳೂರು: ನಗರದ ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆಗೆ ಪ್ರಯಾಣಿಕರಿಂದ ಶುಲ್ಕ ವಸೂಲಿ ಮಾಡುತ್ತಿರುವುದನ್ನು ಖಂಡಿಸಿ ವಕೀಲರು, ಸಾರ್ವಜನಿಕರು ಹಾಗೂ ನಮ್ಮ ಮೆಟ್ರೋ ಪ್ರಯಾಣಿಕರು ಸೋಮವಾರ ಹೈಕೋರ್ಟ್ ಮೆಟ್ರೋ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದರು.
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್‌ ಸಿಎಲ್‌) ತನ್ನ 12 ನಿಲ್ದಾಣಗಳಲ್ಲಿರುವ ಶೌಚಾಲಯಗಳ ನಿರ್ವಹಣೆಯನ್ನು ಸುಲಭ್ ಇಂಟರ್‌ನ್ಯಾಶನಲ್‌ಗೆ ಹೊರಗುತ್ತಿಗೆ ನೀಡಿದೆ. ಹಾಗಾಗಿ ಬಳಕೆದಾರರಿಂದ ಮೂತ್ರ ವಿಸರ್ಜನೆಗೆ ರೂ. 2 ಮತ್ತು ಶೌಚಾಲಯಕ್ಕೆ 5 ರೂ. ಶುಲ್ಕ ವಿಧಿಸಲಾಗುತ್ತಿದೆ.

ಈಗಾಗಲೇ ನಮ್ಮ ಮೆಟ್ರೋ ಶೇ. 71 ರವರೆಗೆ ಮೆಟ್ರೋ ಪ್ರಯಾಣ ದರ ಹೆಚ್ಚಳದ ನಂತರ ಇದೀಗ ಶೌಚಾಲಯ ಬಳಕೆಗೂ ಶುಲ್ಕ ವಿಧಿಸಿರುವುದು ದೈನಂದಿನ ಪ್ರಯಾಣಿಕರಿಗೆ ಹೊರೆಯಾಗಿದೆ. ಶೌಚಾಲಯದಂತಹ ಮೂಲಭೂತ ಸೌಕರ್ಯಗಳು ಉಚಿತವಾಗಿರಬೇಕು ಎಂದು ಪ್ರತಿಭಟನಾಕಾರರು ಆಗ್ರಹಪಡಿಸಿದ್ದಾರೆ.

ಶೌಚಾಲಯ ಬಳಕೆಗೆ ಶುಲ್ಕ ವಿಧಿಸಿರುವುದರಿಂದ ಪ್ರಯಾಣಿಕರಿಗೆ ಹೊರೆಯಾಗಲಿದೆ. ಶೌಚಾಲಯ ಮತ್ತು ಕುಡಿಯುವ ನೀರು ಮೂಲಭೂತ ಸೌಕರ್ಯಗಳಾಗಿವೆಯೇ ಹೊರತು ಪ್ರೀಮಿಯಂ ಸೇವೆಗಳಲ್ಲ ಎಂದು ಪ್ರತಿಭಟನಾಕಾರೊಬ್ಬರು ಹೇಳಿದ್ದಾರೆ.

More articles

Latest article

Most read