ಛತ್ತೀಸ್‌ಗಢ;ಎರಡು ಪ್ರತ್ಯೇಕ ಎನ್‌ ಕೌಂಟರ್‌; 22 ಮಂದಿ ನಕ್ಸಲರ ಹತ್ಯೆ

ದಂತೇವಾಡ : ಛತ್ತೀಸ್‌ಗಢದಲ್ಲಿ ಇಂದು ನಡೆದ ಎರಡು ಪ್ರತ್ಯೇಕ ಎನ್‌ ಕೌಂಟರ್‌ ಗಳಲ್ಲಿ 22 ಮಂದಿ ನಿಷೇಧಿತ ಸಿಪಿಐ (ಮಾವೋವಾದಿ) ಸದಸ್ಯರು ಮತ್ತು ಒಬ್ಬರು ಪೊಲೀಸ್ ಸಿಬ್ಬಂದಿ ಅಸು ನೀಗಿದ್ದಾರೆ.

ಬಿಜಾಪುರ ಮತ್ತು ದಂತೇವಾಡ ಜಿಲ್ಲೆಗಳ ಗಡಿಯಲ್ಲಿ ಅರಣ್ಯದೊಳಗೆ ಇಂದು ಬೆಳಿಗ್ಗೆ 7 ಗಂಟೆ ವೇಳೆಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್‌ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸ್ಥಳದಿಂದ ಇಬ್ಬರು ನಕ್ಸಲರ ಮೃತದೇಹಗಳು, ಬಂದೂಕುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಜಾಪುರದ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ 31 ನಕ್ಸಲರು ಮತ್ತು ಇಬ್ಬರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ ಎನ್‌ಕೌಂಟರ್‌ ನಡೆದು ಒಂದು ತಿಂಗಳ ನಂತರ ಈ ಕಾರ್ಯಾಚರಣೆ ನಡೆದಿದೆ. ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಇದುವರೆಗೆ 18 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಗೃಹ ಸಚಿವ ವಿಜಯ್ ಶರ್ಮಾ ದೃಢಪಡಿಸಿದ್ದಾರೆ. ಎನ್‌ಕೌಂಟರ್ ನಡೆದ ಸ್ಥಳದಿಂದ ಹಲವಾರು ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

More articles

Latest article

Most read