ರಾಸಾಯನಿಕ ಸೋರಿಕೆ : ಮೂವರು ಕಾರ್ಮಿಕರು ಉಸಿರುಗಟ್ಟಿ *ವು

ಯಾದಗಿರಿ : ರಾಸಾಯನಿಕ ಸೋರಿಕೆಯಿಂದ ಸೈದಾಪುರ ಭಾಗದ ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಮುಂಜಾನೆ ಭೀಕರ ದುರಂತ ಸಂಭವಿಸಿ ಮೂವರು ಕಾರ್ಮಿಕರು ಸ್ಥಳದಲ್ಲೇ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತೊಬ್ಬ ಕಾರ್ಮಿಕ ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಚಿಂತಾಜನಕವಾಗಿದೆ. ಸಂತ್ರಸ್ತ ಕಾರ್ಮಿಕನನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಬೆಳಗಿನ ಜಾವ ಸುಮಾರು 5 ಗಂಟೆಯ ಸುಮಾರಿಗೆ ಕಾರ್ಖಾನೆಯೊಂದರಲ್ಲಿ ಇದ್ದಕ್ಕಿದ್ದಂತೆ ರಾಸಾಯನಿಕ ಸೋರಿಕೆಯಾಗಿದ್ದು, ಪರಿಣಾಮವಾಗಿ ಸ್ಥಳದಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದ ಮೂವರು ಕಾರ್ಮಿಕರು ದಾರುಣವಾಗಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಈ ದುರಂತದಲ್ಲಿ ಮೃತಪಟ್ಟವರ ಪೈಕಿ ಇಬ್ಬರು ಉತ್ತರ ಭಾರತದ ಮೂಲದವರಾಗಿದ್ದು, ಮತ್ತೊಬ್ಬರು ನೆರೆಯ ತೆಲಂಗಾಣ ರಾಜ್ಯಕ್ಕೆ ಸೇರಿದವರೆಂದು ತಿಳಿದು ಬಂದಿದೆ.

ಈ ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥ ಕೈಗಾರಿಕೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಪರಿಸರ ಮಾಲಿನ್ಯ, ಸುರಕ್ಷತಾ ಲೋಪ ಮತ್ತು ಜನರ ಜೀವದೊಂದಿಗೆ ಚೆಲ್ಲಾಟ ಮಾಡುವ ಕಂಪನಿಗಳಿಗೆ ಯಾವುದೇ ವಿನಾಯಿತಿ

More articles

Latest article

Most read