ಮುಖ್ಯಮಂತ್ರಿ ನಗರ ಪ್ರದಕ್ಷಿಣೆ ಆರಂಭ: “ಕಾಮಗಾರಿ ಮುಗಿಸದಿದ್ದರೆ ಸಸ್ಪೆಂಡ್ ಆಗ್ತೀರ”

Most read

ಬೆಂಗಳೂರು: ಮಳೆಯಿಂದ ಪ್ರವಾಹ ಉಂಟಾಗಿ ಸಮಸ್ಯೆಗಳಾಗುವ ಪ್ರದೇಶಗಳ ಪರಿಶೀಲನೆಗೆಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನಗರ ಪ್ರದಕ್ಷಿಣೆ ಹಮ್ಮಿಕೊಂಡಿದ್ದು, ಬೆಳಿಗ್ಗೆ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿದರು.

ವಿಜಯನಗರದ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ಸಮೀಪದ ರಾಜಕಾಲುವೆಯಲ್ಲಿ ಪ್ರತಿವರ್ಷ ಮಳೆಗಾಲದಲ್ಲಿ ಪ್ರವಾಹ ಉಂಟಾಗುತ್ತಿದ್ದು, ಈ ಸಂಬಂಧ ಅವರು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಈಗ ಇರುವ ರಾಜಾಕಾಲುವೆಗೆ ಸಮಾನಾಂತರವಾಗಿ ಇನ್ನೊಂದು ಕಾಲುವೆ ನಿರ್ಮಿಸುವುದರಿಂದ ಪ್ರವಾಹ ತಗ್ಗಿಸಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಪ್ರವಾಹ ನಿಯಂತ್ರಣ ಕಾಮಗಾರಿಗೆ 11.5 ಕೋಟಿ ರೂ. ಅಂದಾಜು ವೆಚ್ಚದ ಯೋಜನೆ ರೂಪಿಸಲಾಗಿದ್ದು, ಈ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಈ ರಾಜಕಾಲುವೆಗೆ ಸಾರ್ವಜನಿಕರು ಕಸ ಎಸೆಯುವುದನ್ನು ತಡೆಗಟ್ಟಲು ಕ್ರಮ ವಹಿಸುವಂತೆ ಸೂಚಿಸಿದರು.

ಸಮಸ್ಯೆ ಬಗೆಹರಿಸಲು ಕೊಟ್ಟ ಕಾಲ ಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದ ಅವರು ಈ ವರ್ಷ ಸಮಸ್ಯೆಗೆ ಶಾಶ್ವತ ಪರಿಹಾರ ಆಗಬೇಕು. ಇಲ್ಲದಿದ್ದರೆ ಸಸ್ಪೆಂಡ್ ಆಗ್ತೀರ ಎಂದು ಮುಖ್ಯ ಇಂಜಿನಿಯರ್ ಗೆ ಎಚ್ಚರಿಸಿದರು.

More articles

Latest article