ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರು ಮುಂದುವರೆಯಲಿದ್ದಾರೆ; ಸಚಿವ ಮುನಿಯಪ್ಪ

Most read

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ ಸರ್ಕಾರ ಎರಡೂವರೆ ವರ್ಷ ಪೂರ್ಣಗೊಳಿಸಿದ ನಂತರ ಹಿರಿಯ ಸಚಿವರು ಎರಡನೇ ಹಂತದ ನಾಯಕರಿಗೆ ಅವಕಾಶ ಕಲ್ಪಿಸಬೇಕು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, 2028ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷ ಕಟ್ಟಬೇಕಿದೆ. ಮತ್ತೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಲು, ಪಕ್ಷದ ಒಳಿತಿಗಾಗಿ ಅಭಿವೃದ್ಧಿ ಕೆಲಸಗಳ ಜೊತೆಗೆ ಎರಡನೇ ಹಂತದ ನಾಯಕರಿಗೆ ಅವಕಾಶ ಮಾಡಿಕೊಡಬೇಕು. ಮೂರು ನಾಲ್ಕು ಬಾರಿ ಗೆದ್ದವರೂ ಸಚಿವರಾಗಿಲ್ಲ ಎಂದರು.

ಹಲವು ತಿಂಗಳ ಹಿಂದೆಯೇ ನಾನು ಈ ಮಾತನ್ನು ಒಳ್ಳೆಯ ಉದ್ದೇಶದಿಂದ ಹೇಳಿದ್ದೆ. ಆ ಮಾತಿಗೆ ನಾನು ಈಗಲೂ ಬದ್ಧನಾಗಿದ್ದೇನೆ. ರಾಜಕೀಯವಾಗಿ ಪಕ್ಷ ಕಟ್ಟಬೇಕಾದರೆ ತ್ಯಾಗ ಮಾಡಲು ಸಿದ್ಧರಿರಬೇಕು. ಆದರೆ, ಅಂತಿಮವಾಗಿ ತೀರ್ಮಾನ ಮಾಡುವುದು ಹೈಕಮಾಂಡ್ ಎಂದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಾಗಲಿ ಮುಖ್ಯಮಂತ್ರಿ ಬದಲಾವಣೆ ಕುರಿತಾಗಲಿ, ಪಕ್ಷದಲ್ಲಿ ಯಾವುದೇ ತೀರ್ಮಾನ ಆಗಿಲ್ಲ. ಇಬ್ಬರೂ ತಮ್ಮ ತಮ್ಮ ಸ್ಥಾನಗಳಲ್ಲಿ ಮುಂದುವರಿಯಲಿದ್ದಾರೆ ಎಂದು ತಿಳಿಸಿದರು.

More articles

Latest article