ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ದಿನದಿಂದ ದಿನಕ್ಕೆ ಮಿತಿಮೀರಿದೆ. ಕಾಫಿ ತೋಟದ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕನ ಮೇಲೆ ಒಂಟಿ ಸಲಗ ದಾಳಿ ಮಾಡಿ ಇತ್ತೀಚಿಗೆ ಬಲಿ ಪಡೆದಯುತ್ತಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಇತ್ತೀಚೆಗೆ ಓರ್ವ ಸಾವನ್ನಪ್ಪಿದ ಬೆನ್ನೆಲೆ ಇದೀಗ ಮತ್ತೋರ್ವ ಸಾವನ್ನಪ್ಪಿದ್ದು, 2 ದಿನದ ಅಂತರದಲ್ಲೇ ಇಬ್ಬರು ದುರ್ಮರಣ ಹೊಂದಿದ್ದಾರೆ.
ತರೀಕೆರೆ ತಾಲೂಕಿನ ವರ್ತೆಗುಂಡಿ ಗ್ರಾಮ ವರ್ತೆಗುಂಡಿ ಬಳಿ ಟಿಂಬರ್ ಕಾರ್ಮಿಕ ಅಕ್ಬರ್ ತೋಟದಲ್ಲಿ ಕೆಲಸ ಮಾಡುವಾಗ ಆನೆ ಬಂದಿದೆ. ಅದನ್ನು ಓಡಿಸುವಾಗ ಏಕಾಏಕಿ ನುಗ್ಗಿ ಬಂದ ಪರಣಾಮ ಅಕ್ಬರ್ ಮೇಲೆ ನೆಲಕ್ಕೆ ಬಿದ್ದಿದ್ದಾರೆ. ಬಂತರ ಆತನ ಮೇಲೆ ಕಾಲಿಟ್ಟು ಕಾಡಾನೆ ಕೊಂದಿದೆ. ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತೋಟಕ್ಕೆ ಹೋಗುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಬಲಿ ಪಡೆದುಕೊಂಡಿರುವ ಘಟನೆ ನಿನ್ನೆ ಭಾನುವಾರ ಚಿಕ್ಕಮಗಳೂರು ತಾಲೂಕಿನ ಕಂಚೇನಹಳ್ಳಿಯಲ್ಲಿ ನಡೆದಿತ್ತು. ಇದಾದ ಬೆನ್ನಲ್ಲೇ ಇವತ್ತು ಕೂಡ ಕಾಡಾನೆಯಿಂದ ಒರ್ವ ವ್ಯಕ್ತಿ ಸಾವನಪ್ಪಿದ್ದಾನೆ.
ಎಂಟು ತಿಂಗಳಲ್ಲಿ ಜಿಲ್ಲೆಯಲ್ಲಿ ನಾಲ್ವರನ್ನ ಬಲಿ ಪಡೆದಿರುವ ಕಾಡಾನೆಗಳಿಂದ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಶವಾಗಾರದ ಮುಂದೆ ರೈತರು ಪ್ರತಿಭಟನೆ ಮಾಡಿದ್ದರು.