ಒಲಂಪಿಕ್‌ ಕ್ರೀಡಾಕೂಟದ ಅಂಗವಾಗಿ ಮಕ್ಕಳಿಗಾಗಿಗ್ರಾಮ ಪಂಚಾಯತಿಗಳಲ್ಲಿ ಕ್ರೀಡಾ ಚಟುವಟಿಕೆ

Most read

ಪ್ಯಾರಿಸ್‌ ನಗರದಲ್ಲಿ ನಡೆಯುತ್ತಿರುವ ಜಾಗತಿಕ ಕ್ರೀಡಾ ಹಬ್ಬವಾದ 33ನೇ ಒಲಿಂಪಿಕ್ ಕ್ರೀಡಾಕೂಟದ ಅಂಗವಾಗಿ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಮಕ್ಕಳಿಗಾಗಿ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಗ್ರಾಮಗಳಲ್ಲಿನ ಮಕ್ಕಳು ಮತ್ತು ಸಾರ್ವಜನಿಕರಲ್ಲಿ ಕ್ರೀಡೆಯ ಬಗ್ಗೆ ಒಲವು ಮೂಡಿಸುವ ಸಲುವಾಗಿ ಒಲಿಂಪಿಕ್ ಕ್ರೀಡಾಕೂಟದ ದಿನನಿತ್ಯದ ಮುಖ್ಯಾಂಶಗಳನ್ನು ಅರಿವು ಕೇಂದ್ರಗಳಲ್ಲಿ ಪ್ರತಿ ದಿನ ನಿಗದಿತ ಸಮಯದಲ್ಲಿ ಪ್ರದರ್ಶಿಸಲು ಕ್ರಮವಹಿಸಲಾಗಿದೆ.

ಗ್ರಾಮ ಪಂಚಾಯತಿಗಳು ಮಕ್ಕಳು ಹಾಗೂ ಸಾರ್ವಜನಿಕರಲ್ಲಿ ಕ್ರೀಡಾ ಮನೋಭಾವ ಹಾಗೂ ಕ್ರೀಡೆಯ ಬಗ್ಗೆ ಆಸಕ್ತಿ ಮೂಡಿಸುವ ಸಲುವಾಗಿ ಕಳೆದ ಜೂನ್ 11ರ ಅಂತರ ರಾಷ್ಟ್ರೀಯ ಆಟದ ದಿನದ ಅಂಗವಾಗಿ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ಪ್ರತಿ ತಿಂಗಳು ವಿವಿಧ ವಿಷಯಗಳ ಆಧಾರದಲ್ಲಿ ವಿವಿಧ ಆಟಗಳನ್ನು ಗುರುತಿಸುವುದು, ಹಾಗೂ ಅಂತಹ ಆಟಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ,

More articles

Latest article