ನವದೆಹಲಿ: ದೆಹಲಿಯ ಜಂತರ್ ಮಂತರ್ ಪ್ರದೇಶವನ್ನು ಪ್ರತಿಭಟನಾ ಸ್ಥಳದ ಪಟ್ಟಿಯಿಂದ ಕೇಂದ್ರ ಸರ್ಕಾರ ಕೈಬಿಟ್ಟ ಮರುದಿನವೇ ಕಾಕ್‌ರೋಚ್ ಜನತಾ ಪಾರ್ಟಿ (CJP) ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.
ಬುಧವಾರ ಮುಂಜಾನೆ ಸಿಜೆಪಿ ನಾಯಕರಾದ ಅಶುತೋಷ್ ರಾಂಕಾ ಮತ್ತು ಸೌರವ್ ದಾಸ್ ನೇತೃತ್ವದಲ್ಲಿ ಕಾರ್ಯಕರ್ತರ ಗುಂಪೊಂದು ಜಂತರ್ ಮಂತರ್‌ಗೆ ಆಗಮಿಸಿ ಪ್ರತಿಭಟನೆ ನಡೆಸಿತು.
ಪ್ರತಿಭಟನೆಯ ವಿಡಿಯೊವನ್ನು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೊದಲ್ಲಿ ಕಾರ್ಯಕರ್ತರು ಜಂತರ್ ಮಂತರ್ ಪ್ರವೇಶಿಸಲು ಕಬ್ಬಿಣದ ಗೇಟ್ ಹಾಗೂ ಪೊಲೀಸ್ ಬ್ಯಾರಿಕೇಡ್‌ಗಳನ್ನು ಏರಿ ಒಳನುಗ್ಗುತ್ತಿರುವ ದೃಶ್ಯಗಳು ಕಂಡುಬಂದಿವೆ.
ಪ್ರತಿಭಟನೆ ನಡೆಸಿದ ಕಾರ್ಯಕರ್ತರನ್ನು ಬಳಿಕ ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಭಿಜೀತ್ ದಿಪ್ಕೆ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅವಕಾಶ ರದ್ದುಗೊಳಿಸಿದ ಬೆನ್ನಲ್ಲೇ ಸಿಜೆಪಿ ಕಾರ್ಯಕರ್ತರು ಈ ದಿಢೀರ್ ಪ್ರತಿಭಟನೆಗೆ ಮುಂದಾಗಿದ್ದಾರೆ.

