Saturday, December 7, 2024

ಒತ್ತುವರಿ: ಗ್ರಾಮಸ್ಥರು, ಅರಣ್ಯ ಅಧಿಕಾರಿಗಳ ನಡುವೆ ಘರ್ಷಣೆ

Most read

ಕೋಲಾರ: ಅರಣ್ಯ ಇಲಾಖೆಯ ಒತ್ತುವರಿ ತೆರವು ಸಂಬಂಧ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕಗ್ಗಲನತ್ತ ಗ್ರಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗು ಗ್ರಾಮಸ್ಥರ ನಡುವೆ ಘರ್ಷಣೆ ನಡೆದಿದೆ.

ಒತ್ತುವರಿ ತೆರವುಗೊಳಿಸಲು ಅರಣ್ಯ ಇಲಾಖೆಯ ಅಧಿಕಾರಿಗಳು ಆಗಮಿಸಿದ್ದರು.ಈ ಸಂದರ್ಭದಲ್ಲಿ ಗ್ರಾಮಸ್ಥರು ಮತ್ತುಅರಣ್ಯ ಇಲಾಖೆ ಅಧಿಕಾರಿಗಳ ನಡುವೆ ವಾಗ್ವಾದ, ನೂಕಾಟ ತಳ್ಳಾಟ ನಡೆದಿದೆ. ಸಿಪಿಎಂ ಮುಖಂಡ ಗೋಪಾಲ್ ನೇತೃತ್ವದಲ್ಲಿ ಗ್ರಾಮಸ್ಥರು ಸಭೆ ಸೇರಿದ್ದರು.
ಪರಸ್ಪರ ಕೈ ಕೈ ಮಿಲಾಯಿಸಿದ ಹಂತ ತಲುಪಿದಾಗ ಪೊಲೀಸರು 10 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ರೈತರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಹಲ್ಲೆ ಮಾಡಿದ್ದಾರೆಂದು ಗೋಪಾಲ್ ಆರೋಪಿಸಿದ್ದಾರೆ. ರೈತರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ದ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

More articles

Latest article