ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ ಶಿವಕುಮಾರ್ ಆಯ್ಕೆ

ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಹೈಕಮಾಂಡ್‌ಗೆ ಅಧಿಕಾರ ನೀಡುವ ಏಕವಾಕ್ಯ ನಿರ್ಣಯಕ್ಕೆ ಬೆಂಬಲ ನೀಡಿದರು ಎನ್ನಲಾಗಿದೆ.

ಎಐಸಿಸಿ ವೀಕ್ಷಕರಾಗಿ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಸಭೆಯನ್ನು ಮೇಲ್ವಿಚಾರಣೆ ಮಾಡಿದರು.
ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂಬ ಮಾಹಿತಿ ಹೊರಬಂದಿದೆ.

ಡಿ.ಕೆ. ಶಿವಕುಮಾರ್ ಅವರು ಸಭೆಗೆ ಮುನ್ನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದರು.

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಲಾಗಿದೆ
ಸಚಿವ ಸಂಪುಟ ವಿಸರ್ಜಿಸಲಾಗಿದೆ
ಡಿ.ಕೆ. ಶಿವಕುಮಾರ್ CLP ನಾಯಕರಾಗಿ ಆಯ್ಕೆಯಾಗಿದ್ದಾರೆ
ರಾಜ್ಯಪಾಲರಿಗೆ ಸರ್ಕಾರ ರಚನೆ ಹಕ್ಕು ಮಂಡನೆ ಬಾಕಿ

ಮುಖ್ಯಮಂತ್ರಿ ಪದಗ್ರಹಣ ಸಮಾರಂಭ ಜೂನ್ 3ರಂದು ನಡೆಯುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಹೊಸ ಸಚಿವ ಸಂಪುಟ ರಚನೆ ಕುರಿತು ಚರ್ಚೆಗಳು ಈಗಾಗಲೇ ಆರಂಭವಾಗಿದ್ದು, ಮೊದಲ ಹಂತದಲ್ಲಿ 5 ರಿಂದ 10 ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ಉಪ ಮುಖ್ಯಮಂತ್ರಿ ಹುದ್ದೆಗಳ ಸಂಖ್ಯೆ, ಹೊಸ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಮತ್ತು ಪ್ರಾದೇಶಿಕ-ಜಾತಿ ಸಮತೋಲನದ ಕುರಿತು ಹೈಕಮಾಂಡ್ ಮಟ್ಟದಲ್ಲಿ ಮಾತುಕತೆ ಮುಂದುವರಿದಿದೆ.

More articles

Latest article

Most read