ನಾಡಿನ ಜನತೆಗೆ ಸಿಎಂ ಡಿಸಿಎಂ ದೀಪಾವಳಿ ಶುಭಾಶಯ; ಹಸಿರು ಪಟಾಕಿ ಬಳಸಲು ಮನವಿ

ಬೆಂಗಳೂರು: ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಬೆಳಕಿನ ಹಬ್ಬ ದೀಪಾವಳಿ ಶುಭಾಶಯ ಕೋರಿದ್ದಾರೆ.  ಜತೆಗೆ ದೀಪಾವಳಿಯಲ್ಲಿ ಹಸಿರು ಪಟಾಕಿಗಳನ್ನೇ ಬಳಸಿ ಪರಿಸರ ರಕ್ಷಿಸುವಂತೆಯೂ ಮನವಿ ಮಾಡಿಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ತಮ್ಮ ಸಂದೇಶದಲ್ಲಿ ನಾಡಬಂಧುಗಳಿಗೆ ದೀಪಾವಳಿ ಹಬ್ಬದ ಶುಭಾಶಯಗಳು. ಕತ್ತಲಿನಿಂದ ಬೆಳಕಿನ ಹಾದಿ ತೋರುವ ಈ ಹಬ್ಬವು ಸಮಾಜವನ್ನು ಬಾಧಿಸುತ್ತಿರುವ ದ್ವೇಷ, ಹಿಂಸೆ, ಅಸತ್ಯ, ಅಶಾಂತಿ, ಬಡತನ, ಅಜ್ಞಾನಗಳ ಅಂಧಕಾರವನ್ನು ಸರಿಸಿ, ಸ್ನೇಹ, ಸಹಬಾಳ್ವೆ, ಸತ್ಯ, ನೆಮ್ಮದಿ, ಸುಜ್ಞಾನದ ಬೆಳಕನ್ನು ಎಲ್ಲೆಡೆ ಬೆಳಗಿಸಲಿ ಎಂದು ಹಾರೈಸುತ್ತೇನೆ.

ಹಬ್ಬದ ಸಂಭ್ರಮದ ಜೊತೆಗೆ ಪರಿಸರ ಕಾಳಜಿಯನ್ನು ಮರೆಯದಿರಿ. ಹಸಿರು ಪಟಾಕಿಗಳನ್ನೇ ಬಳಸಿ, ಎಳೆಯ ಮಕ್ಕಳು ಪಟಾಕಿ ಸಿಡಿಸುವಾಗ ಹಿರಿಯರು ಅವರ ಬಗ್ಗೆ ಜಾಗೃತೆ ವಹಿಸಿ. ದೀಪಾವಳಿಯನ್ನು ಸಂಭ್ರಮದಿಂದಲೂ, ಸುರಕ್ಷಿತವಾಗಿಯೂ ಆಚರಿಸಿ ಎಂದು ವಿನಂತಿಸುತ್ತೇನೆ ಎಂದಿದ್ದಾರೆ..

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ತಮ್ಮ ಸಂದೇಶದಲ್ಲಿ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಬೆಳಕಿನ ಹಬ್ಬ ದೀಪಾವಳಿಯು ಪ್ರತಿಯೊಬ್ಬರ ಬದುಕಿನ ಸಂಕಷ್ಟಗಳನ್ನು ಕಳೆದು, ಪ್ರಗತಿಯ ಬೆಳಕು ಬದುಕಿನಲ್ಲಿ ಪಸರಿಸಲಿ. ದೀಪಗಳ ಹಬ್ಬವು ತಮ್ಮೆಲ್ಲರ ಜೀವನದಲ್ಲಿ ಯಶಸ್ಸು, ಸಮೃದ್ಧಿ, ಐಶ್ವರ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ..

More articles

Latest article

Most read