ರಾಜ್ಯಪಾಲರ ಯಾವುದೇ ಪತ್ರಗಳಿಗೆ ಉತ್ತರಿಸದಂತೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ

Most read

ರಾಜ್ಯಪಾಲರ ಯಾವುದೇ ಪತ್ರಗಳಿಗೆ ಕಾರ್ಯದರ್ಶಿಗಳು ಉತ್ತರಿಸದಂತೆ ಸಂಪುಟ ಸಭೆಯಲ್ಲಿ ನಿರ್ಣಯ ಅಂಗೀಕಾರ ಮಾಡಲಾಗಿದೆ.

ಇಂದುಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರ ಯಾವುದೇ ಪತ್ರಗಳಿಗೆ ಸರ್ಕಾರದ ಮುಖ್ಯಕಾರ್ಯದರ್ಶಿ ಉತ್ತರಿಸದಂತೆ ನಿರ್ಣಯ ಕೈಗೊಳ್ಳಲಾಗಿದೆ. ಯಾವುದೇ ಪತ್ರ ಬರೆದರೂ ಸಂಪುಟ ಗಮನಕ್ಕೆ ತರಲು ಸರ್ಕಾರದ ಮುಖ್ಯಕಾರ್ಯದರ್ಶಿ​ಗೆ ಸೂಚನೆ ನೀಡಲಾಗಿದ್ದು, ನೇರವಾಗಿ ರಾಜ್ಯಪಾಲರಿಗೆ ಉತ್ತರಿಸದಂತೆ ನಿರ್ಣಯ ಮೂಲಕ ಮುಖ್ಯಕಾರ್ಯದರ್ಶಿಗೆ ತಿಳಿಸಲಾಗಿದೆ. 

ಕಾರ್ಯದರ್ಶಿ ಬದಲು ಸಂಪುಟ ಮೂಲಕ ರಾಜ್ಯಪಾಲರ ಪತ್ರಗಳಿಗೆ ಸರ್ಕಾರದ ಉತ್ತರ ನೀಡಲು ನಿರ್ಧರಿಸಲಾಗಿದೆ. ಅಲ್ಲದೇ ಅಗತ್ಯವಿದ್ದರಷ್ಟೇ ಉತ್ತರಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಇನ್ನು ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕಾನೂನು ಸಚಿವ ಎಚ್​ಕೆ ಪಾಟೀಲ್,  ಸಂಪುಟ ಸಭೆಯಲ್ಲಿ ರಾಜ್ಯಪಾಲರ ವಿರುದ್ಧ ತೆಗೆದುಕೊಂಡ ಮಹತ್ವದ ತೀರ್ಮಾನದ ಬಗ್ಗೆ ಸ್ಪಷ್ಟಪಡಿಸಿದರು.

ರಾಜ್ಯಪಾಲರು ಅಸಹನೆಯ ವರ್ತನೆಯೊಳಗೆ ಪತ್ರ ಬರೆಯುತ್ತಿದ್ದಾರೆ. ತಕ್ಷಣ ಅಥವಾ ಇವತ್ತೇ ಮಾಹಿತಿ ಕಳುಹಿಸಿ ಎಂದು ಸೂಚಿಸುತ್ತಿದ್ದಾರೆ. ಎಲ್ಲಾ ನಿಯಮಾವಳಿ ಪರಿಶೀಲನೆ ಮಾಡಿ ಕ್ಯಾಬಿನೆಟ್ ನಿರ್ಣಯಿಸಿದೆ. ಕಾರ್ಯದರ್ಶಿಗಳು ಸಂಪುಟ ನಿರ್ಣಯದ ಮೇಲೆ ಮುಂದುವರಿಯಬೇಕು. ಮಾಹಿತಿಯನ್ನು ಕಳಿಸುವ ಮೊದಲು ಸಂಪುಟ ನಿರ್ಣಯ ಪಾಲಿಸಬೇಕು. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದೇವೆ ಎಂದು ಹೇಳಿದ್ದಾರೆ.

More articles

Latest article