ಖೋ ಖೋ ಕ್ರೀಡಾಪಟುಗಳಾದ ಎಂ.ಕೆ ಗೌತಮ್, ಚೈತ್ರಾ ಅವರನ್ನು ಸನ್ಮಾನಿಸಿದ ಸಿಎಂ ಸಿದ್ದರಾಮಯ್ಯ

Most read

ಬೆಂಗಳೂರು: 2025ರ ಪುರುಷರ ಹಾಗೂ ಮಹಿಳಾ ಖೋ ಖೋ ವಿಶ್ವಕಪ್‌ನಲ್ಲಿ  ಅತ್ಯುತ್ತಮ ಆಟವಾಡಿ ಭಾರತ ತಂಡವು ಎರಡೂ ವಿಭಾಗದಲ್ಲಿ ವಿಶ್ವ ಚಾಂಪಿಯನ್ ಆಗಲು ಅತ್ಯುತ್ತಮ‌ ಪ್ರದರ್ಶನ ನೀಡಿದ  ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ ಎಂ.ಕೆ ಗೌತಮ್ ಹಾಗೂ ಮೈಸೂರು ನರಸೀಪುರದ ಕುರಬೂರಿನ ಚೈತ್ರಾ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು. ಇಬ್ಬರೂ ಪಟುಗಳಿಗೆ  ತಲಾ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿದರು.

ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಚಲುವರಾಯಸ್ವಾಮಿ ಮತ್ತು ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.

More articles

Latest article