ದೇಶದ ಹಿತದೃಷ್ಟಿಯಿಂದ ಬಿಜೆಪಿಗೆ ಮರಳಿದ್ದೇನೆ : ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದ ಜಗದೀಶ್ ಶೆಟ್ಟರ್

Most read

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಇಂದು ದೆಹಲಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಜೊತೆಯಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಸುದೀರ್ಘವಾದ ಚರ್ಚೆ ನಡೆಸಿದ ನಂತರ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ.

ಈ ಕುರಿತು ಸುದ್ದಗೋಷ್ಠಿ ನಡೆಸಿ ಮಾತನಾಡಿದ ಜಗದೀಶ್ ಶೆಟ್ಟರ್,  ವಿಧಾನಸಭೆ ಚುನಾವಣೆ ವೇಳೆ ಬಿಜೆಪಿಗೆ ರಾಜೀನಾಮೆ ನೀಡಿದ್ದೆ. ಕಾಂಗ್ರೆಸ್ ಗೆ ಸೇರಿದ್ದೆ ನನ್ನನ್ನು 8-9 ತಿಂಗಳಿಂದ ಬಿಜೆಪಿಗೆ. ಬಿಜೆಪಿ ನಾಯಕರು ಬಹಳಷ್ಟು ಪ್ರಯತ್ನ ಮಾಡಿದ್ದರು. ಆದರೆ ದೇಶದ ಹಿತದೃಷ್ಠಿಯಿಂದ ಬಿಜೆಪಿ ಸೇರ್ಪಡೆಯಾಗಿದ್ದೇನೆ. ಇದರಿಂದಾಗಿ ಸಂತೋಷವಾಗುತ್ತಿದೆ ಎಂದು ಹೇಳಿದ್ದಾರೆ.

ನಾನು ಪರಿಷತ್ ಸ್ಥಾನಕ್ಕೆ ಇ-ಮೇಲ್ ಮೂಲಕ ರಾಜೀನಾಮೆಯನ್ನ ನೀಡಿದ್ದೇನೆ. ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದೇನೆ. ನಂತರ ಸಮಕ್ಷಮ ಡಿಕೆಶಿ ಭೇಟಿಯಾಗಿ ರಾಜೀನಾಮೆ ಸಲ್ಲಿಸುವೆ.  ನರೇಂದ್ರ ಮೋದಿ ಮೊತ್ತೊಮ್ಮೆ ಪ್ರಧಾನ ಮಂತ್ರಿಯಾಗಬೇಕು. ನಾನು ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡುತ್ತೇನೆ ಎಂದ ಶೆಟ್ಟರ್ ಹೇಳಿದ್ದಾರೆ.

ಕಾಂಗ್ರೆಸ್ ಸೇರ್ಪಡೆಯಾದ ದಿನದಿಂದಲೂ ಕಾಂಗ್ರೆಸ್ ನಾಯಕರು ನನಗೆ ಗೌರವ ಸ್ಥಾನಮಾನ ನೀಡಿ ಗೌರವದಿಂದ ನಡೆದುಕೊಂಡಿದ್ದಾರೆ. ಈ ಸಹಕಾರಕ್ಕೆ ಸಿಎಂ ಮತ್ತು ಡಿಸಿಎಂಗೆ ಧನ್ಯವಾದ ಸಲ್ಲಿಸುವೆ ಎಂದು ಹೇಳಿದರು.

ಮುಂದುವರೆದು,  ಇಂದು ಅಮಿತ್ ಶಾ ಅವರನ್ನು ಕೂಡ ಭೇಟಿ ಮಾಡಿದ್ದೆ. ಅವರು ನನ್ನನ್ನು ಪ್ರೀತಿಯಿಂದ ಬರಮಾಡಿಕೊಂಡರು. ಇದೀಗ ನಡ್ಡಾ ಅವರನ್ನು ಕೂಡ ಭೇಟಿ ಮಾಡುತ್ತೇವೆ ಎಂದು ಹೇಳಿದ್ದಾರೆ.

More articles

Latest article