ಮಾಜಿ ಮುಖ್ಯಮಂತ್ರಿ ಕೆಂಗಲ್‌ ಹನುಮಂತಯ್ಯ ಅವರ ಪುಣ್ಯಸ್ಮರಣೆ: ಗೌರವ ಸಲ್ಲಿಸಿದ ಸಿಎಂ, ಡಿಸಿಎಂ

ಬೆಂಗಳೂರು: ವಿಧಾನಸೌಧ ನಿರ್ಮಾತೃ, ಮೈಸೂರು ರಾಜ್ಯದ 2ನೇ ಮುಖ್ಯಮಂತ್ರಿ ಕರ್ನಾಟಕ ಏಕೀಕರಣಕ್ಕಾಗಿ ಶ್ರಮಿಸಿದ ರಾಜ್ಯ ಕಂಡ ಹೆಮ್ಮೆಯ ನಾಯಕ ಕೆಂಗಲ್‌ ಹನುಮಂತಯ್ಯನವರ ಪುಣ್ಯಸ್ಮರಣೆಯ ಪ್ರಯುಕ್ತ ವಿಧಾನಸೌಧದ ಆವರಣದಲ್ಲಿರುವ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಮಾಲಾರ್ಪಣೆ ಮಾಡಿ ಬಳಿಕ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಶಿವಕುಮಾರ್‌ ಅವರು, ವಿಧಾನಸೌಧವನ್ನು ಕೆಂಗಲ್‌ ಹನುಮಂತಯ್ಯನವರು ಕಟ್ಟಿದ್ದಾರೆ, ವಿಕಾಸಸೌಧವನ್ನು ಎಸ್.ಎಂ ಕೃಷ್ಣ ಅವರು ಕಟ್ಟಿದ್ದಾರೆ, ಬೆಂಗಳೂರನ್ನು ಕೆಂಪೇಗೌಡರು ಕಟ್ಟಿದ್ದಾರೆ. ಇವೆಲ್ಲವೂ ಇಂದು ಸಾಕ್ಷಿಗಳಾಗಿ ಉಳಿದುಕೊಂಡಿವೆ. ನಮ್ಮ ಬೆಂಗಳೂರು ಎಲ್ಲದರಲ್ಲೂ ಉತ್ತಮವಾದ ಹಾಗೂ ಶ್ರೇಷ್ಠವಾದ ಜಾಗವಾಗಿದೆ. ಅಂದು ಕೆಂಗಲ್‌ ಹನುಮಂತಯ್ಯನವರು ಮುನ್ನುಡಿ ಬರೆದಿದ್ದಕ್ಕೆ ನಾವೆಲ್ಲರೂ ಇಲ್ಲಿದ್ದೇವೆ. ಅಧಿಕಾರ ಸಿಕ್ಕಾಗ ವಿಧಾನಸೌಧದಂತಹ ಸಾಕ್ಷಿಗುಡ್ಡೆಗಳನ್ನು ಬಿಟ್ಟು ಹೋಗಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡೋಣ ಎಂದರು.

ಈ ಸಂದರ್ಭದಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

More articles

Latest article

Most read