ಸಿಎಂ ಸಿದ್ದರಾಮಯ್ಯ ಬೆಂಗಳೂರು ಪ್ರದಕ್ಷಿಣೆ; ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ ತೆರಿಗೆ ಸೂಚನೆ

Most read

ಬೆಂಗಳೂರು: ಬೆಂಗಳೂರಿನಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಲಹಂಕ, ಮಾನ್ಯತಾ ಟೆಕ್ ಪಾರ್ಜ್‌, ಎಚ್‌ ಬಿಆರ್ ಲೇಔಟ್ ವಡ್ಡರಪಾಳ್ಯ ಲೇಔಟ್, ಗೆದ್ದಲಹಳ್ಳಿ ಮೊದಲಾದ ಪ್ರದೇಶಗಳಲ್ಲಿ ಮಳೆಯಿಂದಾಗಿರುವ ಆನಾಹುತಗಳನ್ನು ವೀಕ್ಷಿಸಿದರು.

ಯಲಹಂಕದಲ್ಲಿ ರಾಜ ಕಾಲುವೆ ಒತ್ತುವರಿ ಸ್ಥಳ ಪರಿಶೀಲಿಸಿದ ಮುಖ್ಯಮಂತ್ರಿಗಳು ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸುವಂತೆ ಸೂಚಿಸಿದರು.

ಮಾನ್ಯತಾ ಟೆಕ್, ಇಬ್ಸು, ಮ್ಯಾನ್ ಫೋ ಹಾಗೂ ಕಾರ್ಲೆ ಖಾಸಗಿ ಬಿಲ್ಡರ್ ಗಳು ರಾಜಕಾಲುವೆ ಒತ್ತುವರಿ ಮಾಡಿರುವುದನ್ನು ಅಧಿಕಾರಿಗಳು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಆಗ ನೋಟಿಸ್ ಕೊಟ್ಟಿಲ್ಲವೇ, ಒತ್ತುವರಿ ಆಗಿರುವುದನ್ನು ನೋಡಿಕೊಂಡು ಕುಳಿತಿದ್ದೀರಾ ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು. ಬಳಿಕ ಎಷ್ಟೇ ದೊಡ್ಡ ಬಿಲ್ಡರ್ ಆಗಿದ್ದರೂ ಮುಲಾಜು ನೋಡಬೇಡಿ, ರಾಜಕಾಲುವೆ ಒತ್ತುವರಿ ತೆರವುಗೊಳಿಸಿ ಎಂದು ಸ್ಪಷ್ಟ ಸೂಚನೆ ನೀಡಿದರು.

HBR ಲೇಔಟ್, ತುಂಬಿ ಹರಿಯುತ್ತಿರುವ ರಾಜಕಾಲುವೆ ಪ್ರದೇಶ ವೀಕ್ಷಿಸಿ ರಾಜಕಾಲುವೆಯ ಹರಿವಿನ ಹಾದಿಯಲ್ಲಿ ರೈಲ್ವೇ ಟ್ರಾಕ್ ಇರುವ ಕಡೆ ಆಗಿರುವ ಬಾಟಲ್ ನೆಕ್ ಸರಿ ಪಡಿಸಿ ವಿಸ್ತರಿಸಲು ಸೂಚನೆ ನೀಡಿದರು.

ಮಳೆಯಿಂದ ಬಾದಿತವಾಗಿರುವ ಪ್ರದೇಶಗಳಲ್ಲಿ Basement ಪಾರ್ಕಿಂಗ್, ಕೆಳ ಹಂತದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ ನೀಡದಂತೆ town planning ನಲ್ಲಿ ಬದಲಾವಣೆ ತರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ವಡ್ಡರಪಾಳ್ಯ ಲೇಔಟ್, ಗೆದ್ದಲಹಳ್ಳಿಯಲ್ಲಿ ರಾಜಕಾಲುವೆ ವಿಸ್ತೀರ್ಣ 29 ಮೀಟರ್ ಗಳಷ್ಟಿರಬೇಕು. ಆದರೆ ಗೆದ್ದಲಹಳ್ಳಿಯ ಕಾಲುವೆ 8  ಮೀಟರ್ ಗೆ ಕುಸಿದಿದೆ. ಮೇಲಿನಿಂದ ರಾಜಕಾಲುವೆಯಲ್ಲಿ ಹರಿದು ಬರುವ ನೀರು ಈ ಬಾಟಲ್ ನೆಕ್ ನಲ್ಲಿ over flow ಆಗಿ ಸಾಯಿ ಲೇಔಟ್ ಗೆ ನುಗ್ಗುತ್ತದೆ ಎನ್ನುವುದು ಸಮಸ್ಯೆಯಾಗಿದೆ. ಆದ್ದರಿಂದ 8 ಮೀಟರ್ ಬಾಟಲ್ ನೆಕ್ ಇರುವ ರೈಲ್ವೇ ವೆಂಟ್ ಅನ್ನು ವಿಸ್ತರಿಸಲು ಸಿಎಂ  ಸೂಚನೆ ನೀಡಿದರು. ನೆನ್ನೆಯಷ್ಟೇ ದಿನ ರೈಲ್ವೇ ಇಲಾಖೆ ಈ ವೆಂಟ್ ವಿಸ್ತರಣೆಗೆ ಅನುಮತಿ ನೀಡಿದ್ದಾರೆ ಎಂದರು.  ಜತೆಗೆ ಕಾಲುವೆ ನಿರ್ವಹಣೆ ಮಾಡದ ಗುತ್ತಿಗೆದಾರರಿಂದ ವಿವರಣೆ ಕೇಳುವಂತೆ ಸೂಚಿಸಿದರು.

ನಂತರ ಮುಖ್ಯಮಂತ್ರಿಗಳು, “ಸಾಯಿ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ” ಪದಾಧಿಕಾರಿಗಳು ಮತ್ತು ಸದಸ್ಯರಿಂದ ಸಮಸ್ಯೆ ಆಲಿಸಿ, ಮನವಿ ಸ್ವೀಕರಿಸಿದರು. ಸಮಸ್ಯೆಗಳ ಬಗ್ಗೆ ಗಂಭೀರ ಗಮನ ಹರಿಸಿ ತಕ್ಷಣಕ್ಕೆ ಸಾಧ್ಯವಿರುವ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

ಮಹದೇವಪುರ ವಿಧಾನಸಭಾ ಕ್ಷೇತ್ರದ ಪಣತ್ತೂರ್ ರೈಲ್ವೇ ಬ್ರಿಡ್ಜ್ ನಲ್ಲಿ ಸಾರ್ವಜನಿಕರ ಮತ್ತು ಸ್ಥಳೀಯ ನಿವಾಸಿಗಳ ಜೊತೆ ಮುಖ್ಯಮಂತ್ರಿಗಳು ಚರ್ಚೆ ನಡೆಸಿದರು.  ಸಮಸ್ಯೆ ಬಗ್ಗೆ ಅಧಿಕಾರಿಗಳ ಜೊತೆ ಸಮಗ್ರ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು, 350 ಮೀಟರ್ ಉದ್ದದ ಒಳಚರಂಡಿಯನ್ನು ನಿರ್ಮಿಸಿ ರಾಜಕಾಲುವೆಗೆ ಸಂಪರ್ಕ ಕೊಡಬೇಕು, ರೈಲ್ವೇ ಇಲಾಖೆ 3 ತಿಂಗಳ ಒಳಗೆ ಕಾಮಗಾರಿ ಮುಗಿಸುವ ರೀತಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

More articles

Latest article