Wednesday, December 11, 2024

ಮಾಜಿ ಸಿಎಂ ಕೃಷ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ; ಐಟಿಬಿಟಿ ಕ್ಷೇತ್ರದ ಕೊಡುಗೆ ಸ್ಮರಣೆ

Most read

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ  ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ.

ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು.ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ‌ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು.

ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮಖ ರಾಜಕಾರಣಿಗಳಿಗೆ ಮಾದರಿಯಾಗಿದೆ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ  ಭಾಗಿಯಾಗಿದ್ದೇನೆ.‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೃಷ್ಣ ಅವರ ನಿಧನಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೂ ಸಂತಾಪ ಸೂಚಿಸಿದ್ದಾರೆ.  ಅನೇಕ ಕೇಂದ್ರ ಸಚಿವರು ರಾಜ್ಯ ಸಂಪುಟದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಎಚ್.ಕೆ. ಪಾಟೀಲ್‌, ಸಚಿವರಾದ ಚೆಲುವರಾಯಸ್ವಾಮಿ, ಜಮೀರ್‌ ಅಹಮದ್‌ ಖಾನ್‌, ಶಿವರಾಜ ತಂಗಡಗಿ, ಎನ್. ಎಸ್.ಬೋಸರಾಜು, ಲಕ್ಷ್ಮೀ ಹೆಬಾಳ್ಕರ್‌ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

More articles

Latest article