ಜಲ ಸಂಪನ್ಮೂಲ
- ಎತ್ತಿನಹೊಳೆ ಯೋಜನೆ ಅಡಿ ಎಲ್ಲಾ ಎಂಟು ವಿಯರ್ಗಳಲ್ಲಿ ಲಭ್ಯವಾಗುವ ನೀರನ್ನು ಕಾಲುವೆಯ ಸರಪಳಿ:241 ಕಿ.ಮೀ ವರೆಗೆ ಹರಿಸಲು ಕ್ರಮ.
- ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ರಾಜ್ಯ ಸರ್ಕಾರದಿಂದಲೇ ಅಗತ್ಯ ಅನುದಾನ; 2,611 ಕೋಟಿ ರೂ. ಮೊತ್ತದ ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿಯಡಿ 30 ಕೆರೆ ತುಂಬಿಸಿ 1.77 ಲಕ್ಷ ಎಕರೆ ಪ್ರದೇಶಕ್ಕೆ ನೀರಾವರಿ ಸಾಮರ್ಥ್ಯ ಸೃಜನೆ.
- ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರಡಿ ಮುಳುಗಡೆಯಾಗುವ ಜಮೀನುಗಳನ್ನು ಒಪ್ಪಂದ ಐತೀರ್ಪಿನ ಮುಖಾಂತರ ಒಂದೇ ಹಂತದಲ್ಲಿ ಭೂಸ್ವಾಧೀನಪಡಿಸಿ ಪರಿಹಾರ ವಿತರಣೆಗೆ ಕ್ರಮ.
- ಮೇಕೆದಾಟು ಸಮತೋಲನ ಜಲಾಶಯ ಯೋಜನೆಯಡಿ ಮುಳುಗಡೆ ಜಮೀನುಗಳ ಸರ್ವೆ ಕಾರ್ಯ ಪೂರ್ಣ.
- ಕಳಸಾ-ಬಂಡೂರಾ ನಾಲಾ ತಿರುವು ಯೋಜನೆಯಡಿ ಕೇಂದ್ರದ ಅನುಮೋದನೆ ದೊರೆತ ಕೂಡಲೇ ಕಾಮಗಾರಿ ಪ್ರಾರಂಭ.
- ಕೃಷ್ಣಾ, ಕಾವೇರಿ ಮತ್ತು ಇತರ ನದಿಗಳ ಕಣಿವೆಯಡಿ ವಿವಿಧ ಯೋಜನೆಗಳಡಿ ಬಾಕಿ ಇರುವ ಕಾಮಗಾರಿ ಪೂರ್ಣಗೊಳಿಸಲು ಕ್ರಮ.
- ಕಾಮಗಾರಿಗಳ ಅಂದಾಜು ತಯಾರಿಕೆಯಲ್ಲಿ ಏಕರೂಪದ ತಾಂತ್ರಿಕ ಮಾನದಂಡ ಅನುಷ್ಠಾನ.
- ತುಂಗಭದ್ರಾ ಜಲಾಶಯದಲ್ಲಿ ಹೂಳಿನಿಂದಾಗಿ ನೀರು ಸಂಗ್ರಹದಲ್ಲಿ ಆಗಿರುವ ಕೊರತೆ ಸರಿದೂಗಿಸಲು ಪರ್ಯಾಯ ಕ್ರಮಗಳ ಪರಿಶೀಲನೆ.
ಸಣ್ಣ ನೀರಾವರಿ - ಎತ್ತಿನಹೊಳೆ ಯೋಜನೆಯಡಿ ಮಧುಗಿರಿ ತಾಲ್ಲೂಕಿನ 45 ಹಾಗೂ ಕೊರಟಗೆರೆ ತಾಲ್ಲೂಕಿನ 62 ಕೆರೆ ತುಂಬಿಸುವ ಯೋಜನೆ 553 ಕೋಟಿ ರೂ. ಮೊತ್ತದಲ್ಲಿ ಅನುಷ್ಠಾನ
- ವೃಷಭಾವತಿ ವ್ಯಾಲಿ ಮೊದಲನೇ ಹಂತದಲ್ಲಿ 70 ಕೆರೆ ತುಂಬಿಸುವ
1080 ಕೋಟಿ ಯೋಜನೆ, ಹೆಚ್.ಎನ್ ವ್ಯಾಲಿ 2ನೇ ಹಂತದ ಯೋಜನೆಯಡಿ 70 ಕೋಟಿ ರೂ. ಮೊತ್ತದಲ್ಲಿ 24 ಕೆರೆ ಹಾಗೂ 93.50 ಕೋಟಿ ರೂ. ಮೊತ್ತದಲ್ಲಿ ಬೆಂಗಳೂರು ಪೂರ್ವ ತಾಲ್ಲೂಕಿನ 18 ಕೆರೆ ತುಂಬಿಸುವ ಯೋಜನೆ ಹಾಗೂ ಇತರೆ ಮುಂದುವರೆದ ಯೋಜನೆಗಳ ಪೂರ್ಣಗೊಳಿಸಲು ಕ್ರಮ. - 2025-26 ರಲ್ಲಿ 2 ಸಾವಿರ ಕೋಟಿ ರೂ. ಮೊತ್ತದ ಹೊಸ ಕಾಮಗಾರಿಗಳ ಪ್ರಾರಂಭ.
ಶಾಲಾ ಶಿಕ್ಷಣ - ಎಡಿಬಿ ನೆರವಿನಲ್ಲಿ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾರಂಭಿಸಲು ಕ್ರಮ.
- ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಯೋಜನೆ 5ಸಾವಿರ ಶಾಲೆಗಳಿಗೆ ವಿಸ್ತರಣೆ.
- ಪ್ರಾಥಮಿಕ ಹಂತದಿಂದ ಪಿಯು ಹಂತದವರೆಗಿನ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ನೀಡುತ್ತಿರುವ ಮಾಸಿಕ ಗೌರವಧನ ತಲಾ 2 ಸಾವಿರ ರೂ. ಹೆಚ್ಚಳ.
- ಬಿಸಿಯೂಟ ತಯಾರಿಕೆ ಸಿಬ್ಬಂದಿ ಗೌರವಧನ 1ಸಾವಿರ ರೂ. ಹೆಚ್ಚಳ.
- ರಾಜ್ಯದ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ 50 ಪ್ರೌಢಶಾಲೆಗಳ ಉನ್ನತೀಕರಣಕ್ಕೆ ಕ್ರಮ.
• ʻನಿರಂತರʼ ಕಾರ್ಯಕ್ರಮದಡಿ ಮಕ್ಕಳ ಹಾಜರಾತಿಯನ್ನು ಖಚಿತಪಡಿಸಲು Face Recognition ತಂತ್ರಜ್ಞಾನದ ಅಳವಡಿಕೆ.
• ಮಾತೃಭಾಷೆಯ ಜೊತೆಗೆ ಆಂಗ್ಲಭಾಷೆಯ ಕೌಶಲ್ಯ ಬೆಳೆಸಲು 4 ಸಾವಿರ ಶಾಲೆಗಳಲ್ಲಿ ದ್ವಿಭಾಷಾ ವಿಭಾಗ ಪ್ರಾರಂಭ.
• ರಾಜ್ಯದ 500 ಪ್ರೌಢಶಾಲೆಗಳಲ್ಲಿ ಕಂಪ್ಯೂಟರ್ ಮತ್ತು ವಿಜ್ಞಾನ ಪ್ರಯೋಗಾಲಯ ಸೌಲಭ್ಯ ವಿಸ್ತರಣೆ.
• 7,500 ಶಾಲಾ-ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಐಟಿಐಗಳಲ್ಲಿ ತರಬೇತಿ.
• ಶಾಲೆ-ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ, ಶೌಚಾಲಯ ನಿರ್ಮಾಣ ಮತ್ತು ದುರಸ್ತಿ ಕಾರ್ಯಗಳಿಗೆ 725 ಕೋಟಿ ರೂ. ಹಾಗೂ ಪೀಠೋಪಕರಣ ಒದಗಿಸಲು 50 ಕೋಟಿ ರೂ. ಬಿಡುಗಡೆ.
• ಮಧ್ಯಾಹ್ನ ಉಪಹಾರ ಯೋಜನೆಯಡಿ 16,347 ಶಾಲೆಗಳ ಅಡುಗೆಮನೆ ನವೀಕರಣ ಹಾಗೂ ಪಾತ್ರೆ ಪರಿಕರ ಪೂರೈಕೆಗೆ 46 ಕೋಟಿ ರೂ.
• ಅಕ್ಷರ ಆವಿಷ್ಕಾರ ಯೋಜನೆ ಅಡಿ 200 ಕೋಟಿ ರೂ. ವೆಚ್ಚದಲ್ಲಿ ಕೆ.ಪಿ.ಎಸ್. ಶಾಲೆಗಳನ್ನಾಗಿ ಕಲ್ಯಾಣ ಕರ್ನಾಟಕ ಭಾಗದ 50 ಶಾಲೆಗಳ ಉನ್ನತೀಕರಣ.
• ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆ ಭರ್ತಿಗೆ ಕ್ರಮ. ಇಲಾಖೆಯಲ್ಲಿರುವ ಶಿಕ್ಷಕರ ಹುದ್ದೆಗಳನ್ನು ತರ್ಕಬದ್ಧಗೊಳಿಸಿ ಇನ್ನೂ
5 ಸಾವಿರ ಹುದ್ದೆ ಭರ್ತಿಗೆ ಕ್ರಮ.
ಉನ್ನತ ಶಿಕ್ಷಣ
• ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆಗೆ ವಿಶ್ವಬ್ಯಾಂಕ್ ನೆರವಿನ 2500 ಕೋಟಿ ರೂ. ವೆಚ್ಚದ ಯೋಜನೆ ಜಾರಿ.
• ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ಕೇಂದ್ರ ವಿಶ್ವವಿದ್ಯಾಲಯ ಎಂದು ಮರುನಾಮಕರಣ.
• 26 ಸರ್ಕಾರಿ ಮಹಿಳಾ ಕಾಲೇಜುಗಳು ಸೇರಿದಂತೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಪದವಿ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ 301 ಕೋಟಿ ರೂ. ಅನುದಾನ. ಹೊಸದಾಗಿ ಪ್ರಾರಂಭಿಸಿದ ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜುಗಳಿಗೆ 10 ಕೋಟಿ ರೂ. ನೆರವು.
• ರಾಜ್ಯದ 16 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವೃತ್ತಿಪರ ವಿಷಯ ತಜ್ಞರನ್ನು ʻProfessor of Practiceʼ ರನ್ನಾಗಿ ನೇಮಕ
• 30 ಕೋಟಿ ರೂ. ವೆಚ್ಚದಲ್ಲಿ UUCMS ತಂತ್ರಾಂಶ ಉನ್ನತೀಕರಣ
• ಚಿಂತಾಮಣಿ ತಾಲ್ಲೂಕಿನಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜು ಸ್ಥಾಪನೆ.
• 10 ಕೋಟಿ ರೂ. ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ ಭಾಗದ 23 ಸಾವಿರ ವಿದ್ಯಾರ್ಥಿಗಳಿಗೆ ವಿಶೇಷ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ
• ನರ ವೈಜ್ಞಾನಿಕ ಖಾಯಿಲೆಗಳಿಗೆ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (KaBHI) ಯೋಜನೆ ಈ ವರ್ಷ ಎಲ್ಲಾ ಹಂತದ ಆರೋಗ್ಯ ಕೇಂದ್ರಗಳಿಗೆ ವಿಸ್ತರಣೆ; 20 ಕೋಟಿ ರೂ. ಅನುದಾನ.
• ಮಾನಸಿಕ ಅಸ್ವಸ್ಥರ ಆರೈಕೆಗೆ ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಆರೈಕೆ ಕೇಂದ್ರಗಳ ಸ್ಥಾಪನೆ.
• ತಡೆಗಟ್ಟಬಹುದಾದ ತಾಯಿ ಮರಣ ಪ್ರಮಾಣ ಇಳಿಸಲು 320 ಕೋಟಿ ರೂ. ಅನುದಾನ.
• ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳು: - ಬೆಂಗಳೂರು ಉತ್ತರ ತಾಲ್ಲೂಕಿನ ವ್ಯಾಪ್ತಿಯಲ್ಲಿ 150 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಯ ಸುಸಜ್ಜಿತ ಆಸ್ಪತ್ರೆ ನಿರ್ಮಾಣ;
- ಹೊಸದಾಗಿ ಘೋಷಣೆಯಾಗಿರುವ 10 ತಾಲ್ಲೂಕುಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಉನ್ನತೀಕರಣ
- 8 ತಾಲ್ಲೂಕು ಆಸ್ಪತ್ರೆ ಹಾಗೂ 2 ಜಿಲ್ಲಾ ಆಸ್ಪತ್ರೆಗಳ ನವೀಕರಣಕ್ಕೆ 650 ಕೋಟಿ ರೂ.,
- ಪುತ್ತೂರು ತಾಲ್ಲೂಕು ಆಸ್ಪತ್ರೆ ಉನ್ನತೀಕರಣ; ಮೊಳಕಾಲ್ಮೂರು ಮತ್ತು ವಿರಾಜಪೇಟೆಯಲ್ಲಿ 200 ಹಾಗೂ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಸ್ಥಾಪನೆ,
- 183 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳ ದುರಸ್ತಿ ಹಾಗೂ ನವೀಕರಣಕ್ಕೆ ಕ್ರಮ.
• ಕಲ್ಯಾಣ ಕರ್ನಾಟಕ ಸಂಪೂರ್ಣ ಆರೋಗ್ಯ ಅಭಿವೃದ್ಧಿ ಯೋಜನೆಯಡಿ ಒಟ್ಟು 873 ಕೋಟಿ ರೂ. ವೆಚ್ಚದಲ್ಲಿ ಯೋಜನೆಗಳ ಜಾರಿ.
• ಸರ್ಕಾರದ ಗುತ್ತಿಗೆ / ಹೊರಗುತ್ತಿಗೆ / ಗೌರವಧನ ಆಧಾರದಲ್ಲಿ ಕಾರ್ಯನಿರ್ವಹಿಸುವ 3 ಲಕ್ಷಕ್ಕೂ ಅಧಿಕ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆ ಸೌಲಭ್ಯ.
• ಕಲ್ಯಾಣ ಕರ್ನಾಟಕ ಮತ್ತು ಗಣಿ ಬಾಧಿತ ಪ್ರದೇಶದಲ್ಲಿ ಪ್ರಸವ ಪೂರ್ವ ಮತ್ತು ನವಜಾತ ಶಿಶುಗಳಲ್ಲಿ ಅಪರೂಪದ ಚಯಾಪಚಯ ಖಾಯಿಲೆ ಪತ್ತೆ ಹಾಗೂ ಗರ್ಭಕಂಠದ ಕ್ಯಾನ್ಸರ್ ತಡೆಯಲು 19 ಕೋಟಿ ರೂ.
• 100 ಕೋಟಿ ರೂ. ವೆಚ್ಚದಲ್ಲಿ ಆರು ಅಸಾಂಕ್ರಾಮಿಕ ರೋಗಗಳ ತಪಾಸಣೆ ಮತ್ತು ಚಿಕಿತ್ಸೆ ನೀಡುವ ʻಗೃಹ ಆರೋಗ್ಯʼ ಯೋಜನೆ ರಾಜ್ಯಾದ್ಯಂತ ವಿಸ್ತರಣೆ.
• ʻಆರೋಗ್ಯ ಕವಚʼ ಸೇವೆ ಬಲಪಡಿಸಲು ಕಮಾಂಡ್ ಕಂಟ್ರೋಲ್ ಕೇಂದ್ರವನ್ನು ಆರೋಗ್ಯ ಇಲಾಖೆಯ ಅಧೀನಕ್ಕೊಳಪಡಿಸಲು ಕ್ರಮ.
• ಸಾಂಕ್ರಾಮಿಕ ರೋಗಗಳಾದ ಚಿಕೂನ್ಗುನ್ಯ, ಡೆಂಗ್ಯೂ ಹಾಗೂ ಮಲೆನಾಡು ಭಾಗದಲ್ಲಿ ಕಾಣಿಸಿಕೊಳ್ಳುವ ಕ್ಯಾಸನೂರು ಖಾಯಿಲೆ (KFD) ಮುಂಜಾಗ್ರತಾ ನಿಯಂತ್ರಣ ಕ್ರಮಗಳಿಗೆ 50 ಕೋಟಿ ರೂ.
• “ಶ್ರವಣ ಸಂಜೀವಿನಿ” ಯೋಜನೆಯಡಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ ಹಾಗೂ ಇಂಪ್ಲಾಂಟ್ಗಳ ಬಿಡಿಭಾಗಗಳ ನಿರ್ವಹಣೆಗೆ 12 ಕೋಟಿ ರೂ.
• ಆಶಾ ಕಾರ್ಯಕರ್ತೆಯರ ತಂಡಾಧಾರಿತ ಗೌರವಧನ ಸಾವಿರ ರೂ. ಹೆಚ್ಚಳ.
• ಸುಟ್ಟಗಾಯಗಳ ತಡೆಗಟ್ಟುವಿಕೆ ಮತ್ತು ಸಂತ್ರಸ್ತ ಮಹಿಳೆಯರ ಚಿಕಿತ್ಸೆಗಾಗಿ ರಾಜ್ಯ ನೀತಿ ಜಾರಿ.
ವೈದ್ಯಕೀಯ ಶಿಕ್ಷಣ
• ಬಾಗಲಕೋಟೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಘಟಕ ವೈದ್ಯಕೀಯ ಕಾಲೇಜು ಹಾಗೂ ಕೋಲಾರದಲ್ಲಿ ಪಿಪಿಪಿ ಆಧಾರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ.
• ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು 297 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲು ಕ್ರಮ.
• ರಾಜ್ಯದ 22 ವೈದ್ಯಕೀಯ ಕಾಲೇಜುಗಳಲ್ಲಿ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್ಗಳ ಪ್ರಾರಂಭ.
• ಬಾದಾಮಿ ತಾಲ್ಲೂಕಿನ ಕುಳಗೇರಿ ಕ್ರಾಸ್ ಹಾಗೂ ಚಿತ್ರದುರ್ಗದಲ್ಲಿ ಸುಸಜ್ಜಿತ ಟ್ರಾಮಾ ಕೇರ್ ಕೇಂದ್ರ ಸ್ಥಾಪನೆ.
• ಮೈಸೂರು ಮತ್ತು ಕಲಬುರಗಿ ವೈದ್ಯಕೀಯ ಕಾಲೇಜುಗಳ ವ್ಯಾಪ್ತಿಯಲ್ಲಿ
100 ಕೋಟಿ ರೂ. ವೆಚ್ಚದಲ್ಲಿ ಪ್ರಾದೇಶಿಕ ಎಂಡೋಕ್ರೈನಾಲಜಿ ಕೇಂದ್ರ ಪ್ರಾರಂಭ.
• ತಲಾ 100 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಮತ್ತು ಕಲಬುರಗಿಯ ವೈದ್ಯಕೀಯ ಕಾಲೇಜುಗಳಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆಗಳ ಸ್ಥಾಪನೆ.
• ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀನದಲ್ಲಿ 100 ಕೋಟಿ ರೂ. ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ.
• ರಾಯಚೂರಿನಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಪೆರಿಫರೆಲ್ ಕ್ಯಾನ್ಸರ್ ಚಿಕಿತ್ಸಾ ಘಟಕ ಸ್ಥಾಪನೆ.
• ಯಲಬುರ್ಗಾ, ಜೇವರ್ಗಿ ಮತ್ತು ಯಾದಗಿರಿಯಲ್ಲಿ ತಲಾ 6 ಕೋಟಿ ರೂ. ವೆಚ್ಚದಲ್ಲಿ ನರ್ಸಿಂಗ್ ಕಾಲೇಜು ಪ್ರಾರಂಭ.